ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ನೌಕರರಿಗೆ ಬಂಪರ್ ಕೊಡುಗೆ ನೀಡಿದ್ದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಏರಿಕೆ ಮಾಡಿದೆ. ಈಗ ನೌಕರರಿಗೆ ನೀಡುತ್ತಿರುವ ತುಟ್ಟಿಭತ್ಯೆಯು ಶೇ.50ರಷ್ಟು ಆಗಿದೆ. ಇದರ ಜತೆಗೆ ಕೇಂದ್ರ ಸರ್ಕಾರವು ಮನೆ ಬಾಡಿಗೆ ಅಲೋವನ್ಸ್ ಹೆಚ್ಚಳದ ಜೊತೆಗೆ ಗ್ರಾಚುಟಿ ಮೊತ್ತವನ್ನು 25 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. 2024ರ ಜನವರಿ 1ರಿಂದಲೇ ತುಟ್ಟಿಭತ್ಯೆ ಹೆಚ್ಚಳವು ಅನ್ವಯವಾಗಲಿದೆ.
ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,868 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಖರ್ಚುವಾಗಲಿದೆ. ಏರುತ್ತಿರುವ ಬೆಲೆಗಳನ್ನು ಸರಿದೂಗಿಸಲು ಸರ್ಕಾರವು ತನ್ನ ಉದ್ಯೋಗಿಗಳಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ನೀಡುತ್ತದೆ. ಇತ್ತೀಚಿನ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ಇದನ್ನು ಲೆಕ್ಕಹಾಕಲಾಗುತ್ತದೆ. ಇದು ಸುಮಾರು 47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರಿಗೆ ಪ್ರಯೋಜನ ನೀಡುತ್ತದೆ. ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಅಂಗೀಕೃತ ಸೂತ್ರಕ್ಕೆ ಅನುಗುಣವಾಗಿದೆ.