Ad Widget .

ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ| ಪ್ರಧಾನಿ ಮೋದಿಯಿಂದ ಭರ್ಜರಿ ಗಿಫ್ಟ್

ಸಮಗ್ರ ನ್ಯೂಸ್: ಇಂದು ಅಂತರಾಷ್ಟ್ರೀಯ ಮಹಿಳಾ ದಿನ ಈ ದಿನವೇ ಪ್ರಧಾನಿ ಮೋದಿ ದೇಶದ ಜನತೆಗೆ ಉಡುಗೊರೆ ನೀಡಿದ್ದು, ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಸಂದೇಶ ಪ್ರಕಟಿಸಿರುವ ಮೋದಿ, ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

Ad Widget . Ad Widget .

ಒಂದು ಕಡೆ ಲೋಕ ಸಭಾ ಚುನಾವಣೆ ಮುಂದೆ ಬರುತ್ತಿದೆ. ಇದೆ ಸಮಯದಲ್ಲಿ ಸಿಲಿಂಡರ್ ಬೆಲೆ ಕಡಿಮೆ ಮಾಡಲಾಗಿದೆ. ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ. ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ. ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ. ಜತೆಗೆ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಎಂದು ಮೋದಿ ಉಲ್ಲೇಖಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *