ಗ್ಯಾರಂಟಿ ಜೊತೆ ಬಾಂಬ್ ಫ್ರೀ ಎಂದ ದಿವಾಕರ್ ಕೋಟ್ಯಾನ್ | ಪ್ರಕರಣ ದಾಖಲು

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳ ಜತೆಗೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿದ್ದ ಮಲ್ಪೆಯ ಗರಡಿ ಮಜಲಿನ ದಿವಾಕರ್ ಕೋಟ್ಯಾನ್ ವಿರುದ್ಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget ... ..

ದಿವಾಕರ್ ಕೋಟ್ಯಾನ್ ಸ್ವತಃ ತಾವೇ ಮಾಡಿರುವ ವಿಡಿಯೋದಲ್ಲಿ, ‘ಬಸ್ ಟಿಕೆಟ್, 2000ರೂ., ವಿದ್ಯುತ್ ಬಿಲ್ ಫ್ರಿ ಜೊತೆಗೆ ಈಗ ಹೊಸದಾಗಿ ಬಾಂಬ್ ಸ್ಪೋಟ ಫ್ರೀ ಕೂಡ ರಾಜ್ಯ ಸರಕಾರ ಕೊಡುತ್ತಿದೆ. ಇದಕ್ಕೂ ಏನು ಹಣ ಕೊಡಲು ಇಲ್ಲ. ಎಲ್ಲವೂ ಫ್ರಿ. ನೇರವಾಗಿ ಮೇಲೆ…ನೋ ಪಾಸ್ ಪೋಟ್ ನೋ ವೀಸಾ.. ಸನ್ಮಾನ್ಯ ಮುಖ್ಯಮಂತ್ರಿ ಸಿದ್ರುಲ್ಲಾ ಖಾನ್… ಹಿಂದುಗಳೇ ಫ್ರೀ ಬೇಕಲ್ಲ ತೆಗೆದುಕೊಳ್ಳಿ,..ಮುಂದೆ ಇನ್ನು ಆರರು ತಿಂಗಳಿಗೆ ಬಸ್, ವಿದ್ಯುತ್, 2000ರೂ. ಜೊತೆ ಬಾಂಬ್ ಕೂಡ ಫ್ರೀ ಸಿಗುತ್ತದೆ. ಮಜಾ ಮಾಡಿ…’ ಹೇಳಿರುವುದು ಕಂಡುಬಂದಿದೆ. ಈ ಸಂಬಂಧ ದಿವಾಕರ್ ಕೋಟ್ಯಾನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Ad Widget

Leave a Comment

Your email address will not be published. Required fields are marked *