ಮತ್ತೆ ತೆರೆದುಕೊಂಡ ರಾಮೇಶ್ವರಂ ಕೆಫೆ

ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ನಂತರ ಇದೀಗ ಮತ್ತೆ ಸಾರ್ವಜನಿಕರಿಗಾಗಿ ತೆರೆದುಕೊಂಡಿದೆ. ಸದ್ಯ ಕೆಫೆ ಸುತ್ತಮುತ್ತ ಇದ್ದ ಬ್ಯಾರಿಕೇಡ್‍ಗಳನ್ನು ತೆರವು ಮಾಡಲಾಗಿದ್ದು, ಬೆಳಗ್ಗೆಯಿಂದಲೇ ಪೂಜೆ ನಡೆಯುತ್ತಿದೆ.

Ad Widget ... ..

ಪ್ರವೇಶ ದ್ವಾರದ ಬಳಿ ಮೆಟಲ್ ಡಿಕೆಕ್ಟರ್ ಅಳವಡಿಕೆ ಮಾಡಲಾಗಿದ್ದು, ಪ್ರತೀ ಗ್ರಾಹಕರೂ ಈ ದ್ವಾರದ ಮೂಲಕವೇ ಒಳಗೆ ಪ್ರವೇಶಿಸಬೇಕಿದೆ. ಮಾರ್ಚ್1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಸಂಭವಿಸಿದ್ದು, ಐದು ಮಂದಿ ಗಾಯಗೊಂಡಿದ್ದರು. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

Ad Widget

Leave a Comment

Your email address will not be published. Required fields are marked *