ಮಹಿಳಾ ದಿನಾಚರಣೆಯಂದೇ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.

. Ad Widget . Ad Widget . Ad Widget .

ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ. ಭಾರತದ ರಾಷ್ಟ್ರಪತಿಗಳು ರಾಜ್ಯಸಭೆಗೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಜಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಉದಾಹರಣೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಹಾರೈಸಿದ್ದಾರೆ.

Leave a Comment

Your email address will not be published. Required fields are marked *