Ad Widget .

ಬಂಟ್ವಾಳ: ಕಾರು ಢಿಕ್ಕಿ- ಗಲ್ಫ್ ಉದ್ಯೋಗಿ ಮೃತ್ಯು

ಸಮಗ್ರ ನ್ಯೂಸ್ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.

Ad Widget . Ad Widget .

ಬAಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48) ಮೃತಪಟ್ಟವರು. ಗಲ್ಫ್ ರಾಷ್ಟçದಲ್ಲಿ ಉದ್ಯೋಗದಲ್ಲಿದ್ದ ಅವರು ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ದೇರಳಕಟ್ಟೆ ಫ್ಲಾಟ್ ನಲ್ಲಿ ನೆಲೆಸಿರುವ ಸಿದ್ದೀಖ್ ಶುಕ್ರವಾರದ ಜುಮಾ ನಮಾಝ್ ಅನ್ನು ಕರೋಪಾಡಿ ಮಸೀದಿಯಲ್ಲಿ ನಡೆಸಿದ್ದರು.

Ad Widget . Ad Widget .

ಅಲ್ಲಿಂದ ವಾಪಸ್ಸು ದೇರಳಕಟ್ಟೆಗೆ ಬರುವ ದಾರಿ ಮಧ್ಯೆ ಮುಡಿಪು ಜಂಕ್ಷನ್‌ನಲ್ಲಿ ಇಳಿದು, ಎಟಿಎಂ ಹಣ ಡ್ರಾ ಮಾಡಿದ್ದಾರೆ. ಅಲ್ಲಿಂದ ವಾಪಸ್ಸು ರಸ್ತೆ ದಾಟಿ ಬಸ್ಸನ್ನೇರಲು ಹೊರಟಾಗ ಮಂಗಳೂರು ಕಡೆಗೆ ಚಲಿಸುತ್ತಿದ್ದ ಸೂರಜ್ ನಾಥ್ ಎಂಬವರು ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ತಲೆ ಭಾಗಕ್ಕೆ ಗಂಭೀರ ಗಾಯಗೊಂಡ ಸಿದ್ದೀಖ್ ಅವರನ್ನು ನಾಟೆಕಲ್ ಕಣಚೂರು ಆಸ್ಪತ್ರೆಗೆ ದಾಖಲಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.

ಸಿದ್ದೀಖ್ ಮುಂದಿನ ವಾರದಲ್ಲಿ ಮತ್ತೆ ಉದ್ಯೋಗ ಮಿತ್ತ ಗಲ್ಫ್ ರಾಷ್ಟçಕ್ಕೆ ಮರಳುವವರಿದ್ದರು. ಮೃತರು ತಂದೆ, ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *