Ad Widget .

ಬೆಳಗಾವಿ: ನಿಪ್ಪಾಣಿಯ ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಪತ್ರ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಶ್ರೀರಾಮ ಮಂದಿರವನ್ನು ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ ಎಂದು ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ದುಷ್ಕರ್ಮಿಗಳು ಬೆದರಿಕೆ ಪತ್ರ ಬರೆದಿದ್ದಾರೆ. ಕಳೆದ ತಿಂಗಳು ಫೆಬ್ರವರಿ 7 ಹಾಗೂ 28 ರಂದು ಹಿಂದಿ ಭಾಷೆಯಲ್ಲಿ ಎರಡು ಪತ್ರಗಳು ಬಂದಿದ್ದು, ಮುಂದಿನ 20, 21 ತಾರೀಖಿನ ಒಳಗಡೆ ರಾಮ‌ ಮಂದಿರವನ್ನ ದೊಡ್ಡ ಪ್ರಮಾಣದಿಂದ ಸ್ಪೋಟಿಸುತ್ತೇವೆ. ಎಂದು ಅನಾಮಧೇಯ ವ್ಯಕ್ತಿಗಳು ಪತ್ರ ಬರೆದಿದ್ದಾರೆ. ದುಷ್ಕರ್ಮಿಗಳ ಪತ್ರ ಸದ್ಯ ಸಂಚಲನ ಸೃಷ್ಟಿಸಿದು. ಆತಂಕ ಸೃಷ್ಟಿಯಾಗಿದೆ.

Ad Widget . Ad Widget .

101 ವರ್ಷಗಳ ಇತಿಹಾಸ ಹೊಂದಿದೆ ಈ ಶ್ರೀರಾಮ ಮಂದಿರ. ಮೊದಲನೆಯ ಪತ್ರ ರಾಮ ಮಂದಿರ ಗರ್ಭ ಗುಡಿಯಲ್ಲಿ ಪತ್ತೆಯಾಗಿದೆ. ಎರಡೆನೇ ಪತ್ರ ಮಂದಿರದ ಆವರಣದ ಹನುಮಾನ ಮಂದಿರದಲ್ಲಿ ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪೋಲಿಸ್ ಹೈ ಅಲರ್ಟ್ ಆಗಿದ್ದು, ಮಂದಿರದ ಆವರಣದಲ್ಲಿ 14 ಸಿಸಿಟಿವಿಗಳನ್ನು ಅಳವಡಿಸಿಲಾಗಿದೆ. ಬಂದೋಬಸ್ತ್​​ಗೆ ನಿಯೋಜಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *