Ad Widget .

ಮಧ್ಯಪ್ರದೇಶದ ರಾಜ್ಯ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ

ಸಮಗ್ರ ನ್ಯೂಸ್: ಇಂದು ಮಧ್ಯ ಪ್ರದೇಶದ ಭೋಪಾಲ್​ನಲ್ಲಿರುವ ರಾಜ್ಯ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸಚಿವಾಲಯ ಕಟ್ಟಡ ವಲ್ಲಭ ಭವನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ವೇಗಕ್ಕೆ ದಟ್ಟವಾದ ಹೊಗೆ ಆವರಿಸಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿದ ಎಂಬ ವರದಿಯಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಕಟ್ಟಡದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವು ಮಂದಿ ಸಚಿವರ ಕಚೇರಿಗಳೂ ಇಲ್ಲಿವೆ. ಕಟ್ಟಡದ ಐದನೇ ಮಹಡಿಯಲ್ಲಿ ಮುಖ್ಯಮಂತ್ರಿ ಕಚೇರಿ ಇದೆ. ಬೆಂಕಿ ಅವಘಡದ ಕಾರಣ ಹಲವು ಮಹತ್ವದ ದಾಖಲೆಗಳು ಸುಟ್ಟು ಭಸ್ಮವಾಗಿವೆ ಎಂದು ಹೇಳಲಾಗುತ್ತಿದೆ. ಒಳಗೆ ಐದು ಮಂದಿ ಸಿಲುಕಿರುವ ಬಗ್ಗೆ ವರದಿಯಾಗಿದೆ. ಬೆಂಕಿ ಅವಘಡದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಬೆಂಕಿ ನಂದಿಸುವ ಕಾರ್ಯ ಇನ್ನೂ ನಡೆಯುತ್ತಿದೆ.

Ad Widget . Ad Widget . Ad Widget .

ಸದ್ಯ 5 ಮಂದಿ ಕಟ್ಟಡದ ಒಳಗೆ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ, ಈ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗಿದೆ. ಸದ್ಯ ಪೊಲೀಸರು ಕಟ್ಟಡದ ಸುತ್ತಮುತ್ತಲಿನ ಜನರನ್ನು ರಕ್ಷಿಸಲಾಗಿದ್ದೆ. ಬೆಂಕಿ ಅವಘಡದ ನಿಖರ ಕಾರಣ ತಿಳಿದುಬಂದಿಲ್ಲ.

ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಪ್ರತಿಕ್ರಿಯಸಿದ್ದು, ಭವನದ ಹಳೆಯ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಜಿಲ್ಲಾಧಿಕಾರಿಯಿಂದ ಮಾಹಿತಿ ಸ್ವೀಕರಿಸಲಾಗಿದ್ದು, ಅದನ್ನು ಮೇಲ್ವಿಚಾರಣೆ ಮಾಡಲು ಸಿಎಸ್‌ಗೆ ಸೂಚಿಸಿದ್ದೇನೆ ಎಂದಿದ್ದಾರೆ. ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು ನಾವು ನಿರ್ದೇಶನಗಳನ್ನು ನೀಡಿದ್ದೇವೆ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸಬಾರದು, ಅದಕ್ಕಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಹೇಳಿದ್ದಾರೆ.

Leave a Comment

Your email address will not be published. Required fields are marked *