ಸಮಗ್ರ ನ್ಯೂಸ್: ಬೆಂಗಳೂರಿನ ನಗರದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಜನರಿಗೆ ಕುಡಿಯಲು ನೀರಿಗೆ ಪರದಾಡುವ ಪರಿಸ್ಥಿತಿ ಈಗ ಬಂದೊದಗಿದೆ. ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಟ್ಯಾಂಕರ್ ಮೂಲಕ ನೀರು ಹಾಕಲಾಗುತ್ತಿದೆ. ನಗರದಲ್ಲಿ ನೀರಿನ ಸಮಸ್ಯೆ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಗೆ ಧರಣಿ ಮಾಡಲಿದೆ.
ಇನ್ನೂ ಈ ವಿಚಾರವಾಗಿ ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಮಾಡಿದ ತಪ್ಪಿನಿಂದ ಬೆಂಗಳೂರಲ್ಲಿ ನೀರಿನ ಸಮಸ್ಯೆ ಅನುಭವಿಸ್ತಿದ್ದೇವೆ. ಸರ್ಕಾರದ ಬಳಿ ಬೋರ್ ವೆಲ್ ಕೊರಿಸುವುದಕ್ಕೂ ಹಣವಿಲ್ಲ. ನಿಮ್ಮ 2000 ರೂಪಾಯಿಯಿಂದ ಏನು ಆಗುತ್ತೆ ಎಂದು ಪ್ರಶ್ನಿಸಿದ್ದಾರೆ. ಹೀಗೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಬೆಂಗಳೂರಿನ ಮಾಗಡಿರಸ್ತೆಯಲ್ಲಿ ಸಾರ್ವಜನಿಕರು ಕುಡಿಯುವ ನೀರಿಗಾಗಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.