Ad Widget .

ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ನಿಷೇಧ – ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಲರ್ ಕಾಟನ್‌ ಕ್ಯಾಂಡಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

Ad Widget . Ad Widget .

ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲರ್ ಕಾಟನ್‌ ಕ್ಯಾಂಡಿಯಲ್ಲಿ ಹಲವು ವಿಷಕಾರಿ ಅಂಶಗಳು ಒಳಗೊಂಡಿರುವುದರಿಂದ ಅವುಗಳನ್ನು ಮಾರಾಟ, ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Ad Widget . Ad Widget .

ಕಲರ್‌ ಬಳಸದೇ ಇರುವ ಕಾಟನ್‌ ಕ್ಯಾಂಡಿಗೆ ಅವಕಾಶ ನೀಡಲಾಗಿದ್ದು, ಗೋಬಿ ಮಂಚೂರಿಯನ್‌ ತಯಾರಿಕೆಯಲ್ಲಿಯೂ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿಲ್ಲ.

ಯಾವುದೇ ರೀತಿಯ ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10.00 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ತಿಳಿಸಿದರು.

ಕೃತಕ ಬಣ್ಣಗಳನ್ನು ಬಳಸಿರುವ ತಿಂಡಿ ತಿನಿಸುಗಳನ್ನು ದೀರ್ಘಕಾಲ ಬಳಸುವುದರಿಂದ ಚಿಕ್ಕಮಕ್ಕಳು ಸೇರಿದಂತೆ ಬಳಕೆದಾರರಿಗೆ ಕ್ಯಾನ್ಸರ್‌ನಂತಹ ಮಾರಕ ರೋಗಗಳಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಸಾರ್ವಜನಿಕರು ಕೃತಕ ಬಣ್ಣಗಳನ್ನು ಬಳಸಿ ತಯಾರಿಸಲಾಗಿರುವ ಉಪಯೋಗಿಸದಂತೆ/ಮಿತವಾಗಿ ಬಳಸುವಂತೆ ತಿಳಿಸಿದರು.

Leave a Comment

Your email address will not be published. Required fields are marked *