Ad Widget .

ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದರೆ ಚುನಾವಣೆಯಲ್ಲಿ ನೋಟಾ ಒತ್ತುತ್ತೇವೆ : ಬೆಂಬಲಿಗರಿಂದ ಆಕ್ರೋಶ

ಸಮಗ್ರ ನ್ಯೂಸ್ : ಲೋಕಸಭೆ ಚುನಾವಣೆಯು ಸಮೀಪಿಸುತ್ತಿದ್ದಂತೆ ಬಿಜೆಪಿ ಪಕ್ಷದಲ್ಲಿ ಟಿಕೆಟ್ಗಾಗಿ ದೊಡ್ಡ ಸಮರವೇ ನಡೆಯುತ್ತಿದೆ. ಇದೀಗ ಕೊಡಗು ಮತ್ತು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲ ಎಲ್ಲರಲ್ಲಿಯೂ ಮೂಡಿದೆ.

Ad Widget . Ad Widget .

ಈಗಾಗಲೇ ಎರಡು ಬಾರಿ ಚುನಾವಣೆಯಲ್ಲಿ ಗೆದ್ದಿರುವ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿಯ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಎಂದು ಬಿಜೆಪಿ ಪಾಳಯದಲ್ಲಿಯೇ ಅಪಸ್ವರ ಕೇಳಿ ಬರುತ್ತಿದೆ. ಆದರೆ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ತಪ್ಪಿಸಲು ಪ್ರಯತ್ನಿಸುತ್ತಿರುವವರು ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

Ad Widget . Ad Widget .

ಈ ಎಲ್ಲಾ ಜಟಾಪಟಿಗಳ ನಡುವೆ ಪ್ರತಾಪ್ ಸಿಂಹ ಬೆಂಬಲಿಗರು “ಅರಮನೆ ನಗರಿ ಮೈಸೂರಿನಿಂದ ಇಡೀ ರಾಜ್ಯದ ಬಹುತೇಕ ಎಲ್ಲಾ ಭಾಗಗಳಿಗೂ ರೈಲು ಸಂಪರ್ಕ ಕೊಟ್ಟಿದ್ದು ಯುವ ನಾಯಕ ಪ್ರತಾಪ್ ಸಿಂಹ. ಕರ್ನಾಟನವನ್ನೇ ಮತ್ತೆ ಬೆಸೆದ ಪ್ರಗತಿಯ ಹರಿಕಾರ ಪ್ರತಾಪ್ ಸಿಂಹ ಒಂದು ವೇಳೆ ಈ ಬಾರಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡದೆ ಹೋದರೆ ಚುನಾವಣೆಯಲ್ಲಿ ನೋಟಾ ಒತ್ತುತ್ತೇವೆ” ಎಂದು ಹೇಳುವ ಮೂಲಕ ರಾಜ್ಯ ಮತ್ತು ಕೇಂದ್ರ ನಾಯಕರಿಗೆ ಎಚ್ಚರಿಕೆಯನ್ನು ರವಾನಿಸಿದ್ದಾರೆ.

Leave a Comment

Your email address will not be published. Required fields are marked *