Ad Widget .

ಬಿಡದಿಯ ತೋಟದ ಮನೆಯಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆ

ಸಮಗ್ರ ನ್ಯೂಸ್: ರಾಮನಗರ ಜಿಲ್ಲೆಯ ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆಯಾಗಿವೆ. ಬಲರಾಮ್ ಎಂಬುವವರು ತಲೆ ಬುರುಡೆ ಸಂಗ್ರಹ ಮಾಡುತ್ತಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

Ad Widget . Ad Widget .

ಬಲರಾಮ್ ತಲೆ ಬುರಡೆಗಳನ್ನು ಸಂಗ್ರಹಿಸಿ ಅವುಗಳಿಂದ ಮಾಟ-ಮಂತ್ರ ಮಾಡುತ್ತಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ನಿನ್ನೆಯಷ್ಟೇ ಮಹಾ ಶಿವರಾತ್ರಿಯ ಅಮಾವಾಸ್ಯೆ ಮುಗಿದಿದೆ. ರಾಮನಗರದ ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ಬಲರಾಮ್ ಎಂಬ ವ್ಯಕ್ತಿ ರಾತ್ರಿ ವೇಳೆ ಸ್ಮಶಾನದಲ್ಲಿ ಪೂಜೆ ಮಾಡಿದ್ದು ಇದನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರ ದೂರಿನ ಮೇರೆಗೆ ಸ್ಮಶಾನಕ್ಕೆ ಬಂದ ಬಿಡದಿ ಪೊಲೀಸರು ವಿಚಾರಣೆ ನಡೆಸಿ ಬಲರಾಮ್​ನನ್ನು ವಶಕ್ಕೆ ಪಡೆದಿದ್ದಾರೆ. ಬಲರಾಮ್ ತೋಟದ ಮನೆಯಲ್ಲಿ ಅನೇಕ ಮಾನವರ ತಲೆ ಬುರುಡೆಗಳು ಪತ್ತೆಯಾಗಿವೆ. ನನ್ನ ತಾತನ ಕಾಲದಿಂದಲೂ ಬುರುಡೆ ಪೂಜೆ ಮಾಡುತ್ತಾ ಬಂದಿದ್ದೇವೆ ಎಂದು ಬಲರಾಮ್ ಹೇಳಿದ್ದಾರೆ. ಆದರೆ ಪೊಲೀಸರು ಈ ಪ್ರಕರಣವನ್ನು ದಾಖಲಿಸಿಕೊಂಡು ಬಲರಾಮ್ ನನ್ನು ವಿಚಾರಣೆ ನಡೆಸುತ್ತಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *