Ad Widget .

ಕಡಬ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸುಧೀರ್ ಕುಮಾರ್ ಶೆಟ್ಟಿ ಆಯ್ಕೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳು ಇಂದು ಜನಸಾಮಾನ್ಯರನ್ನು ಮುಟ್ಟಿದೆ. ಈ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯನ್ನು ರಚಿಸಿದೆ.

Ad Widget . Ad Widget .

ಕಡಬ ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ, ಕಾಂಗ್ರೆಸ್ ನಾಯಕರಾದ ಸುಧೀರ್ ಕುಮಾರ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ.

Ad Widget . Ad Widget .

ಸುಧೀರ್ ಕುಮಾರ್ ಬಿಳಿನೆಲೆ ಗ್ರಾಮದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕಡಬ ಬ್ಲಾಕ್ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾಗಿ, ಸುಳ್ಯ ವಿಧಾನಸಭೆ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಕಡಬ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಾಗಿ, ಜಿಲ್ಲಾ ಕಾಂಗ್ರೆಸ್ ಸದಸ್ಯರಾಗಿ, ಸತತ ಮೂರು ಬಾರಿ ಗ್ರಾಮ ಪಂಚಾಯತಿ ಸದಸ್ಯರಾಗಿ ಹಾಗೂ ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, 8 ವರುಷಗಳ ಕಾಲ ಧಾರ್ಮಿಕ ಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯ ದೇವಾಸ್ಥಾನದ ಮೇಲುಸ್ತುವಾರಿ ಸಮಿತಿ ಸದಸ್ಯರಾಗಿ ಪ್ರಸ್ತುತ ಬಿಳಿನೆಲೆ ಗ್ರಾಮ ಪಂಚಾಯತಿ ಸದಸ್ಯರಾಗಿ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Leave a Comment

Your email address will not be published. Required fields are marked *