ಪುತ್ತೂರು: ಆಟೋಚಾಲಕನ ಮೇಲೆ ಹಲ್ಲೆ, ಜೀವಬೆದರಿಕೆ-ದೂರು ದಾಖಲು

ಸಮಗ್ರ ನ್ಯೂಸ್ : ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಕರಾರು ತೆಗೆದ ದಯಾನಂದ, ಅಚ್ಚುತ ಹಾಗೂ ಇಬ್ಬರು ಅಪರಿಚಿತರು ಹಲ್ಲೆ ನಡೆಸಿ, ಜೀವಬೆದರಿಕೆ ಹಾಕಿರುವುದಾಗಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget ... ..

ಇಂದು ಬೆಳಗಿನ ಜಾವ, ತನ್ನ ಆಟೋರಿಕ್ಷಾದಲ್ಲಿ ಪ್ರಯಾಣಿಕರೊಬ್ಬರಿಗೆ ಡ್ರಾಪ್ ಕೊಡಲು ಪುತ್ತೂರು ತಾಲೂಕು ಪಡವನ್ನೂರು ಗ್ರಾಮದ ಕೆಳಗಿನ ಕನ್ನಡ್ಕ ಬಸ್ ನಿಲ್ದಾಣ ಬಲಿ ಬಂದಿದ್ದಾಗ ದಯಾನಂದ, ಅಚ್ಚುತ ಹಾಗೂ ಮತ್ತಿಬ್ಬರು ಅಪರಿಚಿತರು ಆಟೋ ಬಳಿ ಬಂದು, ಈ ಹಿಂದೆ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ತಕರಾರು ತೆಗೆದು ಹಲ್ಲೆ ನಡೆಸಿ, ಜೀವಬೆದರಿಕೆ ಹಾಕಿರುವುದಾಗಿ ಪುತ್ತೂರು ನಿವಾಸಿ ನಾಗೇಶ (34) ಎಂಬವರು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾಗೇಶ್ ನೀಡಿದ ದೂರಿನನ್ವಯ ಅ.ಕ್ರ 38-2024 ಕಲಂ: IPಅ 1860 (U/s-324,506) ರಂತೆ ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *