Ad Widget .

ಬಸ್​ ಮೇಲೆ ಬಿದ್ದ ಹೈ ಟೆನ್ಷನ್ ತಂತಿ: 6 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಗಾಜಿಪುರದಲ್ಲಿ ಬಸ್​ ಮೇಲೆ ಹೈ ಟೆನ್ಷನ್ ತಂತಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, 6 ಮಂದಿ ಸಜೀವ ದಹನವಾಗಿದ್ದಾರೆ. ಬೆಂಕಿ ಭೀಕರ ಸ್ವರೂಪ ಪಡೆದುಕೊಂಡಿದ್ದು, ಬಸ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಮಾಹಿತಿ ಪ್ರಕಾರ ಬೆಂಕಿಯಲ್ಲಿ ಆರು ಮಂದಿ ಸಜೀವ ದಹನವಾಗಿದ್ದು ಹೆಚ್ಚಿನ ಸಾವು ನೋವು ಸಂಭವಿಸುವ ಸಾಧ್ಯತೆ ಇದೆ

Ad Widget . Ad Widget .

ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದರು, ಬಸ್​ನಲ್ಲಿ 35ಕ್ಕೂ ಹೆಚ್ಚು ಮಂದಿ ಇದ್ದರು. ಅದೇ ಸಂಧರ್ಭದಲ್ಲಿ ಮರ್ದಾದಲ್ಲಿ ಅಪಘಾತ ಸಂಭವಿಸಿದೆ. ಡಿಎಂ, ಎಸ್​ಪಿ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಸ್ಪಂದಿಸಿ, ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ

Ad Widget . Ad Widget .

Leave a Comment

Your email address will not be published. Required fields are marked *