ಸಮಗ್ರ ಉದ್ಯೋಗ : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ವಿಸಿಟಿಂಗ್ ಕನ್ಸಲ್ಟೆಂಟ್ (ರೇಡಿಯಾಲಜಿ)ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾರ್ಚ್ 12, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಶೈಕ್ಷಣಿಕ ಅರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂ.ಡಿ, ಡಿಎನ್ಬಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರು 1, 2024ಕ್ಕೆ ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಒಂದು ಭೇಟಿಗೆ 7,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮುಖ್ಯ ವ್ಯವಸ್ಥಾಪಕರು (HR)
ಕೈಗಾರಿಕಾ ಆರೋಗ್ಯ ಕೇಂದ್ರ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್)
ಸುರಂಜನದಾಸ್ ರಸ್ತೆ (ಹಳೆಯ ವಿಮಾನ ನಿಲ್ದಾಣದ ಹತ್ತಿರ)
ಬೆಂಗಳೂರು-560017
ಗಮನಿಸಿ: ಅಭ್ಯರ್ಥಿಗಳಿಗೆ ಯಾವುದೇ ಗೊಂದಲ/ ಪ್ರಶ್ನೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 080-22323005/080-22328023 ಗೆ ಕರೆ ಮಾಡಿ.