ಸಮಗ್ರ ಉದ್ಯೋಗ: ರೈಲ್ವೆ ನೇಮಕಾತಿ ಮಂಡಳಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9144 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 8, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು.
ಶೈಕ್ಷಣಿಕ ಅರ್ಹತೆ:
ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ
10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ, ಬಿ.ಎಸ್ಸಿ, ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ಟೆಕ್ನಿಷಿಯನ್ ಗ್ರೇಡ್-I ಸಿಗ್ನಲ್- ಡಿಪ್ಲೊಮಾ, ಬಿ.ಎಸ್ಸಿ, ಬಿಇ/ಬಿ.ಟೆಕ್
ಟೆಕ್ನಿಷಿಯನ್- III- 10ನೇ ತರಗತಿ, 12ನೇ ತರಗತಿ, ಐಟಿಐ
ವಯೋಮಿತಿ:
ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 1, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 36 ವರ್ಷ ಮೀರಿರಬಾರದು.
ಟೆಕ್ನಿಷಿಯನ್ ಗ್ರೇಡ್-I ಸಿಗ್ನಲ್- 18 ರಿಂದ 36 ವರ್ಷ
ಟೆಕ್ನಿಷಿಯನ್- III- 18 ರಿಂದ 33 ವರ್ಷ
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು 5 ವರ್ಷಗಳು
ವೇತನ:
ಟೆಕ್ನಿಷಿಯನ್ ಗ್ರೇಡ್-I ಸಿಗ್ನಲ್- ಮಾಸಿಕ ₹ 29,200
ಟೆಕ್ನಿಷಿಯನ್- III- ಮಾಸಿಕ ₹ 19,900
ಅರ್ಜಿ ಶುಲ್ಕ:
SC/ ST, ಮಾಜಿ ಸೈನಿಕರು, PwBD, ಮಹಿಳಾ, ಟ್ರಾನ್ಸ್ಜೆಂಡರ್, EBC ಅಭ್ಯರ್ಥಿಗಳು: ರೂ. 250/-
ಇತರೆ ಅಭ್ಯರ್ಥಿಗಳು: ರೂ. 500/-
ಪಾವತಿ ವಿಧಾನ: ಆನ್ಲೈನ್
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ಮೆಡಿಕಲ್ ಪರೀಕ್ಷೆ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://www.rrbchennai.gov.in/ apply here
ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.