Ad Widget .

ಕಡಬ: ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಕೇಸ್: ಮತ್ತಿಬ್ಬರ ವಶ

ಸಮಗ್ರ ನ್ಯೂಸ್ : ಕಡಬದ ಸರ್ಕಾರಿ ಕಾಲೇಜಿನಲ್ಲಿ ನಡೆದ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಕೇರಳದ ಇನ್ನಿಬ್ಬರನ್ನು ಮಂಗಳವಾರ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

Ad Widget . Ad Widget .

ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾ. 5ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡ ಪ್ರಧಾನ ಆರೋಪಿ ಜತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮತ್ತೂರಿನ ಪ್ರದೇಶಕ್ಕೆ ತೆರಳಿ ತನಿಖೆ ನಡೆಸಲಾಗಿತ್ತು.

Ad Widget . Ad Widget .

ಇದೀಗ ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ಕಡಬಕ್ಕೆ ಕರೆತಂದಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಆರೋಪಿ ಅಬಿನ್ ಆಸಿಡ್ ದಾಳಿ ನಡೆಸಿದ ದಿನ ಕಾಲೇಜಿನ ಸಮವಸ್ತ್ರ ಹೋಲುವ ಡ್ರೆಸ್ ಹಾಕಿದ್ದು, ಇದನ್ನು ಹೊಲಿದುಕೊಟ್ಟ ವ್ಯಕ್ತಿ ಹಾಗೂ ಆಸಿಡ್ ನೀಡಿದ ವ್ಯಕ್ತಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

ಈ ನಡುವೆ ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ.

Leave a Comment

Your email address will not be published. Required fields are marked *