Ad Widget .

ಬೆಂಗಳೂರಿನಲ್ಲಿ ರಿಯಲ್‌ಎಸ್ಟೇಟ್ ಉದ್ಯಮಿ ಕೊಲೆ: ಕಾರಿನಲ್ಲಿ ಶವ ಬಿಟ್ಟು ಹಂತಕರು ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನ ಬಾಗಲೂರು ಕ್ರಾಸ್​​ ಬಳಿ
ಕಾರೊಂದರಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಕಾರಿನಲ್ಲಿ ಅನುಮಾನಾಸ್ಪದವಾಗಿ ರಿಯಲ್‌ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂಬುವವರ ಶವಪತ್ತೆಯಾಗಿದೆ. ಶವದ ಮೇಲೆ ಗಾಯದ ಗುರುತುಗಳಿದ್ದು ಕೊಲೆ ಮಾಡಿ ಕಾರಿನಲ್ಲಿ ಶವ ಇಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget . Ad Widget .

ಉದ್ಯಮಿ ಕೃಷ್ಣ ಯಾದವ್ ನಿನ್ನೆ ರಾತ್ರಿಯಿಂದ ಕಾಣೆಯಾಗಿದ್ದರು. ಕೆಲಸಕ್ಕೆಂದು ಹೊರ ಹೋಗಿದ್ದವರು ರಾತ್ರಿ ಕಳೆದರೂ ಮನೆಗೆ ಹಿಂತಿರುಗಿರಲಿಲ್ಲ. ಇಂದು ಬೆಳಗ್ಗೆ ತನ್ನದೆ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಾರುತಿ ಶಿಫ್ಟ್​ ಕಾರು ರಕ್ತ ಸಿಕ್ತವಾಗಿದೆ. ಹಂತಕರು ಕೊಲೆ ಮಾಡಿ ಬಾಗಲೂರು ಕ್ರಾಸ್ ಬಸ್ ನಿಲ್ದಾಣದ‌ ಬಳಿ ಕಾರು ಬಿಟ್ಟು ಹೋಗಿದ್ದಾರೆ. ಸದ್ಯ ಪೊಲೀಸರು ತೀವ್ರ ತನಿಖೆ ಶುರು ಮಾಡಿದ್ದು, ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *