Ad Widget .

‘ಆನೆ‌ ಹೋಗುವಾಗ ನಾಯಿಗಳು ಬೊಗಳುವುದು ಸಹಜ’| ಮಾಧ್ಯಮಗಳನ್ನು ನಾಯಿಗೆ ಹೋಲಿಸಿದ ಅನಂತಕುಮಾರ್ ಹೆಗ್ಡೆ!!

ಸಮಗ್ರ ನ್ಯೂಸ್: ‘ವಿವಾದ ಸೃಷ್ಟಿಯಾದರೂ ದೃಢವಾಗಿ ನಿಲ್ಲುವುದು ನಿಜವಾದ ನಾಯಕತ್ವ. ಪತ್ರಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಗೆ ತಲೆಕೆಡಿಸಿಕೊಳ್ಳಬಾರದು’ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.

Ad Widget . Ad Widget .

ಸಂವಿಧಾನ ತಿದ್ದುಪಡಿಗೆ ಬಿಜೆಪಿ 400 ಸೀಟು ಗೆಲ್ಲಬೇಕು ಎಂದು ಎರಡು ದಿನದ ಹಿಂದೆ ತಾವೇ ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿದ ಬೆನ್ನಲ್ಲೆ ಸಂಸದರು ಮಾಧ್ಯಮಗಳ ವಿರುದ್ಧವೂ ವಾಗ್ದಾಳಿ ನಡೆಸಿದರು.

Ad Widget . Ad Widget .

‘ಆನೆ ನಡೆದು ಹೋಗುವಾಗ ನಾಯಿಗಳು ಬೊಗಳುವುದು ಸಹಜ. ಅವು ಬೊಗಳಿದರೆ ಮಾತ್ರ ಆನೆಗೆ ಗತ್ತು ಬರುತ್ತದೆ’ ಎನ್ನುತ್ತ ತಮ್ಮನ್ನು ಆನೆಗೆ, ಮಾಧ್ಯಮಗಳನ್ನು ನಾಯಿಗೆ ಹೋಲಿಕೆ ಮಾಡಿದರು.

‘ಬಿಜೆಪಿ ಸಶಕ್ತ ನಾಯಕತ್ವ ಹೊಂದಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಬಿಜೆಪಿ ಗೆಲ್ಲುತ್ತಲೇ ಇರಬೇಕು. ವಿವಾದ ಸೃಷ್ಟಿಯಾಗಿದೆ ಎಂದು ಕಾರ್ಯಕರ್ತರು ವಿಚಲಿತರಾದರೆ ನಾಯಕತ್ವ ಅಲುಗಾಡುತ್ತದೆ. ಹೀಗಾಗಿ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುವ ವಿಷಯಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಬಿಜೆಪಿ ಗೆಲ್ಲಿಸುವ ಚರ್ಚೆ ಆರಂಭಿಸಿ’ ಎಂದರು.

ಗೋಕರ್ಣ ಬಿಜೆಪಿ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಮಾತನಾಡಿದ್ದ ಸಂಸದ ಅನಂತಕುಮಾರ, ‘ಆರ್ಟಿಕಲ್ 370 ರದ್ದು, ಅಯೋಧ್ಯೆ ರಾಮಮಂದಿರ ನಿರ್ಮಾಣವಷ್ಟೆ ಹಿಂದೂ ಸಮಾಜದ ಗುರಿಯಲ್ಲ. ಹಿಂದೂ ರಾಷ್ಟ್ರನಿರ್ಮಾಣ, ವಿಶ್ವದಾದ್ಯಂತ ಭಗವಾಧ್ವಜ ಹಾರಿಸುವುದು ಅಂತಿಮ ಗುರಿ’ ಎಂದರು.

Leave a Comment

Your email address will not be published. Required fields are marked *