ಸಮಗ್ರ ಉದ್ಯೋಗ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಲಬುರಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಜಿಲ್ಲಾ ಮಿಷನ್ ಕೋಆರ್ಡಿನೇಟರ್, ಸ್ಪೆಷಲಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 14, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಹುದ್ದೆಯ ಮಾಹಿತಿ:
ಜಿಲ್ಲಾ ಮಿಷನ್ ಕೋಆರ್ಡಿನೇಟರ್ -1
ಸ್ಪೆಷಲಿಸ್ಟ್ (ಫೈನಾನ್ಶಿಯಲ್ ಲಿಟರಸಿ & ಅಕೌಂಟೆಂಟ್)-1
ಶೈಕ್ಷಣಿಕ ಅರ್ಹತೆ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಲಬುರಗಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಲಬುರಗಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ:
ಕಲಬುರಗಿ
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ಸ್ಕಿಲ್ ಟೆಸ್ಟ್
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಉಪನಿರ್ದೇಶಕರು
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ರೈಲ್ವೆ ನಿಲ್ದಾಣ
I.B ರಸ್ತೆ
ಗುರುಕುಲ ಕಾಲೇಜು ಹತ್ತಿರ
ಧಡೇಡ್ ಹೆರಿಗೆ ಆಸ್ಪತ್ರೆ ಆವರಣ
ಕಲಬುರಗಿ
ಕರ್ನಾಟಕ
ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.