ಬೆಳ್ಳಾರೆ: ಆ್ಯಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ!

ಸಮಗ್ರ ನ್ಯೂಸ್ : ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ.

Ad Widget ... ..

ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದಾರೆ ನಂತರ ಸಹೋದ್ಯೋಗಿ ತಕ್ಷಣ ಮನೆಯವರಿಗೆ ವಿಚಾರ ತಿಳಿಸಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆಯನ್ನು ಮಾಡಿದರು. ಅಷ್ಟರಲ್ಲಿ ಮಹಿಳೆಯು ವಾಂತಿ ಮಾಡಲು ಪ್ರಾರಂಭಿಸಿದ್ದಾರೆ.

Ad Widget

ಬೆಳ್ಳಾರೆಯ ಆಸ್ಪತ್ರೆಯ ವೈದ್ಯರ ಸಲಹೆ ಮೇರೆಗೆ ಮಹಿಳೆಯನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *