Ad Widget .

ಶಿರಾಡಿ‌ ಘಾಟ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ| ಭಾರೀ ಪ್ರಮಾಣದ ಗ್ಯಾಸ್ ಸೋರಿಕೆ| ವಾಹನ ಸಂಚಾರಕ್ಕೆ ನಿರ್ಬಂಧ

ಸಮಗ್ರ ನ್ಯೂಸ್: ಮಂಗಳೂರು-ಬೆಂಗಳೂರು ಎನ್‍ಎಚ್-75 ರ ಡಬಲ್ ಕ್ರಾಸ್ ಬಳಿ ಗ್ಯಾಸ್ ಟ್ಯಾಂಕರ್‍ವೊಂದು ಪಲ್ಟಿಯಾಗಿ ಟ್ಯಾಂಕರ್‍ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಇಂದು (ಮಾ.13) ಸಂಭವಿಸಿದೆ.

Ad Widget . Ad Widget .

ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಪಲ್ಟಿಯಾದ ಗ್ಯಾಸ್ ಟ್ಯಾಂಕರ್‍ನಿಂದ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಮಾರ್ಗಮಧ್ಯೆ ನೂರಾರು ವಾಹನಗಳು ನಿಂತಲ್ಲೆ ನಿಂತಿವೆ. ಸದ್ಯ ಪೊಲೀಸರು ಮಂಗಳೂರು- ಹಾಸನ- ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿದ್ದಾರೆ.

Ad Widget . Ad Widget .

ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ.

ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮುಗಿಯುವವರೆಗೂ ಈ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ಬಂದ್ ಆಗಲಿದೆ.

Leave a Comment

Your email address will not be published. Required fields are marked *