ರಾಜ್ಯದಲ್ಲಿ ಬರ ಪರಿಸ್ಥಿತಿ/ ಬೇಸಿಗೆ ರಜೆಯಲ್ಲೂ ಮಕ್ಕಳಿಗೆ ಬಿಸಿಯೂಟ

ಸಮಗ್ರ ನ್ಯೂಸ್: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ್ದು, ಈ ಬಾರಿ ಬೇಸಿಗೆ ರಜೆಯಲ್ಲೂ ಮಕ್ಕಳಿಗೆ ಬಿಸಿಯೂಟ ಸಿಗಲಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಬೇಸಿಗೆ ರಜೆಯಲ್ಲೂ ಮುಂದುವರೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

. Ad Widget . Ad Widget . Ad Widget

ಏಪ್ರಿಲ್ 11ರಿಂದ ಮೇ 28ರವರೆಗೆ 1ರಿಂದ 8ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ವಿತರಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಸರ್ಕಾರ ಈಗಾಗಳೇ ಬರ ಪೀಡಿತ ತಾಲ್ಲೂಕುಗಳ ಘೋಷಣೆ ಮಾಡಿದೆ. ಬರ ಪೀಡಿತ ತಾಲೂಕುಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತದೆ.

. Ad Widget .

Leave a Comment

Your email address will not be published. Required fields are marked *