ಪುತ್ತೂರು : ಮಾ.14 ರಂದು ವಿದ್ಯುತ್ ನಿಲುಗಡೆ

ಸಮಗ್ರ ನ್ಯೂಸ್ : ಉಪ್ಪಿನಂಗಡಿ- ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‍ಪ್ರೆಸ್, ಕಾಂಚನ ಮತ್ತು ವಾಟರ್ ಸಪ್ಲೈ ಫೀಡರ್ ಮತ್ತು 110/33/11 ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಮತ್ತು ಕೆಮ್ಮಾರ ಫೀಡರ್‍ನಲ್ಲಿ ಮಾ.14 ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5.30ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂಬ ಮಾಹಿತಿ ತಿಳಿದು ಬಂದಿದೆ.

Ad Widget ... ..

ಆದುದರಿಂದ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಮತ್ತು 110/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‍ನಿಂದ ವಿದ್ಯುತ್ ಸರಬರಾಜಾಗುವ ಬಜತ್ತೂರು, ಕೊಲ, ಹಿರೇಬಂಡಾಡಿ, ರಾಮಕುಂಜ, ನೆಕ್ಕಿಲಾಡಿ ಮತ್ತು ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Ad Widget

Leave a Comment

Your email address will not be published. Required fields are marked *