ಸಮಗ್ರ ನ್ಯೂಸ್: ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ ಹಾಗೂ ಅನೂಪ್ ಚಂದ್ರ ಪಾಂಡೆ ರಾಜೀನಾಮೆ ಹಿನ್ನೆಲೆಯಲ್ಲಿ ಖಾಲಿ ಇರುವ ಎರಡು ಚುನಾವಣಾ ಆಯುಕ್ತರ ಹುದ್ದೆಗಳ ಭರ್ತಿ ಪ್ರಕ್ರಿಯೆ ಚುರುಕುಗೊಂಡಿದ್ದು, ಮಾ.14ರಂದು ಉನ್ನತಾಧಿಕಾರಿಗಳ ಸಭೆ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಉನ್ನತ ಮಟ್ಟದ ಚುನಾವಣಾ ಸಮಿತಿಯು ಚುನಾವಣಾ ಆಯೋಗವನ್ನು ಆಯ್ಕೆ ಮಾಡಲು ಮಾರ್ಚ್ 14 ರಂದು ಸಭೆ ನಡೆಸಲು ನಿರ್ಧರಿಸಿದೆ.
ಮಾರ್ಚ್ 15 ರಂದು ಸಂಜೆ 6 ಗಂಟೆಗೆ ಸಭೆ ನಡೆಯಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಈ ಹಿಂದೆ ತಿಳಿಸಿದ್ದರು. ಆದರೆ ಇದೀಗ ಮಾರ್ಚ್ 14 ರಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ತ್ರಿಸದಸ್ಯ ಆಯ್ಕೆ ಸಮಿತಿ ಸಭೆ ನಡೆಯಲಿದೆ ಎಂದು ವರದಿಯಾಗಿದೆ.