Ad Widget .

ಲಂಚ ಸ್ವೀಕರಿಸುವ ವೇಳೆ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ

ಸಮಗ್ರ ನ್ಯೂಸ್: ತುಮಕೂರಿನ ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಮಂಜುನಾಥ್.ವಿ ಕೆ ಎಂಬ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. 40 ಸಾವಿರ ಹಣ ತೆಗೆದುಕೊಳ್ಳುವಾಗ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಇವರು ಮಂಜುನಾಥ್ ರೆಡ್ಡಿ ಎಂಬುವವರ ಬಳಿ 50 ಸಾವಿರ ಲಂಚಕ್ಕೆ ಹಣಕ್ಕೆ ಬೇಡಿಕೆಯಿಟ್ಟಿದ್ದ‌ರು. ಈ ಕುರಿತು ಜಿ.ಮಂಜುನಾಥ್ ರೆಡ್ಡಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇವರ ದೂರಿನ ಮೇಲೆ ಲೋಕಾಯುಕ್ತ ಡಿವೈಎಸ್ ಪಿ ಉಮಾಶಂಕರ್ ನೇತೃತ್ವದಲ್ಲಿ ದಾಳಿ ನಡೆಸಿ, ಭ್ರಷ್ಟ ಅಧಿಕಾರಿಯನ್ನು ಅರೆಸ್ಟ್​ ಮಾಡಿದ್ದಾರೆ.

Ad Widget . Ad Widget .

ಜಿಲ್ಲೆಯ ಹಲವು ಭಾಗಗಳಲ್ಲಿ ಇಂತಹ ಪ್ರಕರಣ ಬೆಳಕಿಗೆ ಬರುತ್ತಲೆ ಇದೆ. ಅದ್ರೆ ಭ್ರಷ್ಟ ಅಧಿಕಾರಿಗಳನ್ನು ಬಂಧನ ಮಾಡುತ್ತಾರೆಯೆ ಹೊರತು, ಇಂತಹ ಪ್ರಕರಣವನ್ನು ಬ್ರೇಕ್ ಮಾಡಲು ಸಾಧ್ಯವಾಗಿಲ್ಲ.

Ad Widget . Ad Widget .

Leave a Comment

Your email address will not be published. Required fields are marked *