ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಮತ್ತೊಂದು ಹಿನ್ನಡೆ ಅನುಭವಿಸಿದ್ದು, ಪಂಜಾಬ್ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪತ್ನಿ ಪ್ರಣೀತ್ ಕೌರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಸೇರ್ಪಡೆಗೂ ಮುನ್ನ ಪಟಿಯಾಲಾ ಸಂಸದೆ ಪ್ರಣೀತ್ ಕೌರ್ ಅವರು ಕಾಂಗ್ರೆಸ್ನ ಮುಖ್ಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಅಂದಿನಿಂದ ಅವರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು.
ಪಂಜಾಬ್ನ ಪಟಿಯಾಲ ಕ್ಷೇತ್ರದಿಂದ ಪ್ರಣೀತ್ ಕೌರ್ ನಾಲ್ಕು ಬಾರಿ ಕಾಂಗ್ರೆಸ್ ಸಂಸದರಾಗಿದ್ದು, ಕಳೆದ 25 ವರ್ಷಗಳಿಂದ ಪಟಿಯಾಲಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಅವರಿಗೆ ಬಿಜೆಪಿ ಪಟಿಯಾಲ ಕ್ಷೇತ್ರವನ್ನು ನೀಡಬಹುದು ಎಂದು ಮಾಹಿತಿ ಇದೆ. 30 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಯೊಬ್ಬರು ಈ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂದು ವರದಿಯಾಗಿದೆ.