ಡಿವಿಎಸ್ ಗೆ ಅಮಿತ್ ‘ಶಾ’ಕ್| ಬೆಂಗಳೂರು ಉತ್ತರಕ್ಕೆ ಶೋಭಾ; ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಾರಾ ಗೌಡ್ರು!?

ಸಮಗ್ರ ನ್ಯೂಸ್: 2 ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಜಿ ಸಿಎಂ ಡಿ.ವಿ ಸದಾನಂದಗೌಡ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಮಿಸ್ ಆಗಿದೆ. ಈ ಬಗ್ಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಸದಾನಂದಗೌಡ ಅವರಿಗೆ ಕರೆ ಮಾಡಿದ್ದು, ಅಭ್ಯರ್ಥಿ ಬದಲಾವಣೆ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಮೂಲಕ ತಮಗೆ ಟಿಕೆಟ್​ ಇಲ್ಲ ಎನ್ನುವುದನ್ನು ಸದಾನಂದಗೌಡರಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಟಿಕೆಟ್ ಇಲ್ಲ ಎನ್ನುವುದನ್ನು ದೂರವಾಣಿ ‌ಮೂಲಕ ಮಾಹಿತಿ ನೀಡಿದ ಬೆನ್ನಲ್ಲೇ ಸದಾನಂದಗೌಡ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದು, ಕ್ಷೇತ್ರದ ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ.

Ad Widget ... ..

ಇದರ ಜೊತೆಗೆ ಕೊನೆಯಲ್ಲಿ ‘ಆದ್ರೆ, ಇನ್ಮುಂದೆಯೂ ನಿಮ್ಮ ಜತೆಗೆ ಇರುತ್ತೇನೆ’ ಎಂದು ಬರೆದುಕೊಂಡಿರುವುದು ಅಚ್ಚರಿಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ಸುಳಿವು ನೀಡಿದಂತೆ ಸದಾನಂದಗೌಡ ಅವರು ಕಾಂಗ್ರೆಸ್​​ನಿಂದ ಸ್ಪರ್ಧೆ ಮಾಡುತ್ತಾರಾ ಎನ್ನುವ ಚರ್ಚೆಗಳು ಶುರುವಾಗಿವೆ.

Ad Widget

ಇದರೊಂದಿಗೆ ಸದಾನಂದಗೌಡ ಅವರಿಗೆ ಈ ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗುವುದಿಲ್ಲ ಎನ್ನುವುದು ಸ್ಪಷ್ಟವಾಗಿದ್ದು, ಈ ಕ್ಷೇತ್ರದಿಂದ​ ಶೋಭಾ ಕರಂದ್ಲಾಜೆ ಸ್ಪರ್ಧಿಸುವ ಸಾಧ್ಯತೆಗಳಿವೆ.

ಮಾಜಿ ಸಿಎಂ ಸದಾನಂದ ಗೌಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಈ ಹಿಂದೆಯೂ ಹಲವು ಬಾರಿ ಊಹಾಪೋಹಗಳು ಹರಿದಾಡಿದ್ದವು. ಇದೀಗ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಇದೀಗ ಅವರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಗುಸುಗುಸು ಕೇಳಿಬರುತ್ತಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ , ಡಿವಿಎಸ್​ಗೆ ಆಹ್ವಾನ ನೀಡಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಸದಾನಂದ ಗೌಡ ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಕಳೆದ ವರ್ಷದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಊಹೋಪೋಹಗಳು ಹರಿದಾಡಿದ್ದವು. ಇದೀಗ ಟಿಕೆಟ್ ಇಲ್ಲ ಎನ್ನುವುದು ಖುದ್ದು ಹೈಕಮಾಂಡ್​ ಸ್ಪಷ್ಟಪಡಿಸಿದ್ದರಿಂದ ಸದಾನಂದಗೌಡ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

Leave a Comment

Your email address will not be published. Required fields are marked *