Ad Widget .

ನೆಲ್ಯಾಡಿ: ಅನಾರೋಗ್ಯದಿಂದ ವ್ಯಕ್ತಿ ಸಾವು

ಸಮಗ್ರ ನ್ಯೂಸ್ : ಬಿದ್ದು ತಲೆಗೆ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ ಘಟನೆ ನೆಲ್ಯಾಡಿಯ ಕೌಕ್ರಾಡಿ ಗ್ರಾಮದಲ್ಲಿ ನಡೆದಿದೆ.

Ad Widget . Ad Widget .

ಮೃತಪಟ್ಟ ವ್ಯಕ್ತಿ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ನಿವಾಸಿ ಶೀನ ಮುಗೇರ(50) ಎಂದು ಗುರುತಿಸಲಾಗಿದೆ.

Ad Widget . Ad Widget .

ಮಾ.10ರಂದು ಸಾಯಂಕಾಲ ನೆಲ್ಯಾಡಿ ಪೇಟೆಗೆ ಹೋದವರು ವಾಪಾಸು ಮನೆಗೆ ಬಂದಾಗ ಅವರ ತಲೆಯ ಹಿಂಬದಿ ಗಾಯವಾಗಿತ್ತು. ಮನೆಯವರು ವಿಚಾರಿಸಿದಾಗ ರಸ್ತೆಯಲ್ಲಿ ನಡೆದುಕೊಂಡು ಬರುವಾಗ ಬಿದ್ದು ಗಾಯವಾಗಿದೆ ಎಂದು ತಿಳಿಸಿದ್ದರು. ಬಳಿಕ ಅವರಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡಿ ಕಳುಹಿಸಿಕೊಟ್ಟಿದ್ದರು.

ಮಾ.11ರ ಮಧ್ಯರಾತ್ರಿ ಉಸಿರಾಟದ ತೊಂದರೆ ಉಂಟಾಗಿದ್ದು, ಚಿಕಿತ್ಸೆಗಾಗಿ ಕೂಡಲೇ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಹೃದಯ ಸಂಬಂಧಿ ಅಥವಾ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿರುವುದಾಗಿ ಮೃತರ ಪುತ್ರ ಜಗದೀಶ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *