Ad Widget .

ತುಮಕೂರಿನಲ್ಲಿ ತುಕಾಲಿ ಸಂತೋಷ್​ ಕಾರು ಅಪಘಾತ: ಆಟೋ ಜಖಂ

ಸಮಗ್ರ ನ್ಯೂಸ್: ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ತುಕಾಲಿ ಸಂತೋಷ್​ ಅವರ ಕಾರು ಅಪಘಾತಕೀಡಾಗಿದೆ. ಎರಡು ವಾರಗಳ ಹಿಂದೆ ಅಷ್ಟೇ ಅವರು ಹೊಸ ಕಾರು ಖರೀದಿ ಮಾಡಿದ್ದರು.

Ad Widget . Ad Widget .

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ತುಕಾಲಿ ಸಂತೋಷ್​ ಅವರ ಕಾರಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ. ಇದರಿಂದ ಕಿಯಾ ಕಾರು ಜಖಂ ಆಗಿದೆ. ಆಟೋ ಕೂಡ ಭಾಗಶಃ ಜಖಂ ಆಗಿದೆ. ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ

Ad Widget . Ad Widget .

ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ತುಕಾಲಿ ಸಂತೋಷ್​ ಅವರು ಹೋಗುತ್ತಿದ್ದರು. ಅದೇ ವೇಳೆ ಕುಣಿಗಲ್​ನಿಂದ ಕುರುಡಿಹಳ್ಳಿಗೆ ಆಟೋ ಬರುತ್ತಿತ್ತು. ತುಕಾಲಿ ಸಂತೋಷ್​ ಅವರ ಕಾರಿನ ಬಲಗಡೆಗೆ ಆಟೋ ಡಿಕ್ಕಿ ಹೊಡೆದಿದೆ. ಆಟೋ ಚಾಲಕನನ್ನು ಜಗದೀಶ್​ ಎಂದು ಗುರುತಿಸಲಾಗಿದೆ. ಆಟೋ ಚಾಲಕ ಜಗದೀಶ್​ ಮದ್ಯ ಸೇವಿಸಿದ್ದ ಎನ್ನಲಾಗಿದೆ. ಗಾಯಗೊಂಡಿರುವ ಜಗದೀಶ್​ಗೆ ಕುಣಿಗಲ್​ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Comment

Your email address will not be published. Required fields are marked *