Ad Widget .

ಯಡಿಯೂರಪ್ಪ ಲಿಂಗಾಯತನೇ ಅಲ್ಲ : ಯತ್ನಾಳ್

ಸಮಗ್ರ ನ್ಯೂಸ್ : ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಅವರ ಮಗ ಬಿ.ವೈ ವಿಜಯೇಂದ್ರ ಅವರ ದಂಧೆಯಾಗಿದೆ. ಅಲ್ಲದೆ ಯಡಿಯೂರಪ್ಪ ಯಾವೊಬ್ಬ ಲಿಂಗಾಯತರನ್ನು ಉದ್ದಾರ ಮಾಡಿಲ್ಲ ಹಾಗೂ ಅವನು ಲಿಂಗಾಯತನೇ ಅಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

Ad Widget . Ad Widget .

ಹೌದು, ನಿರಂತರವಾಗಿ ಯಡಿಯೂರಪ್ಪ ಹಾಗೂ ಅವರ ಕುಟುಂಬದವರ ಬಗ್ಗೆ ಕಿಡಿಕಾರುವ ಬಸವನಗೌಡ ಯತ್ನಾಳ್ ಅವರು ಇದೀಗ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಯಾವೊಬ್ಬ ಲಿಂಗಾಯತರನ್ನು ಉದ್ದಾರ ಮಾಡಿಲ್ಲ ಹಾಗೂ ಅವನು ಲಿಂಗಾಯತನೇ ಅಲ್ಲ ಎಂದು ಹೇಳಿದ್ದು, ಯಡಿಯೂರಪ್ಪ ಅವರ ಹಿಂದೆ ಕೆಲವು ಸ್ವಾಮಿಜಿಗಳಿದ್ದಾರೆ. ಹಣ ನೀಡುತ್ತಾನೆ ಅಂತಹ ಸ್ವಾಮೀಜಿಗಳು ಆತನಿಗೆ ತತಾಸ್ಥು ಅಂತಾರೆ. ಈ ಲೋಕಸಭೆ ಚುನಾವಣೆ ಬಳಿಕ ಯಡಿಯೂರಪ್ಪ ಇನ್ನಷ್ಟು ಬಂಡವಾಳ ಬಯಲು ಮಾಡುತ್ತೆನೆ ಎಂದಿದ್ದಾರೆ.

Ad Widget . Ad Widget .

ಇಷ್ಟೇ ಅಲ್ಲದೆ ಲೋಕಸಭಾ ಚುನಾವಣೆಯಲ್ಲಿ ಹಾಲಿ ಮೂವರು ಸಂಸದರಿಗೆ ಟಿಕೆಟ್ ಕೈ ತಪ್ಪುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಪೂಜ್ಯ ತಂದೆ –ಮಗ ಇಬ್ಬರೂ ಸೇರಿ ಬಿಜೆ ಅಭ್ಯರ್ಥಿಗಳನ್ನು ಸೋಲಿಸುವುದು ಅವರ ಗುರಿಯಾಗಿದೆ. ಈ ಹಿಂದೆ ನನ್ನನ್ನು ಸೋಲಿಸಲು ಬಿ.ವೈ ವಿಜಯೇಂದ್ರ ಹಣ ಕಳುಹಿಸಿದ್ದ ಎಂದು ಕಿಡಿಕಾರಿದ್ದಾರೆ.

Leave a Comment

Your email address will not be published. Required fields are marked *