Ad Widget .

ಶಿವಮೊಗ್ಗದಲ್ಲಿ ರಾಘವೇಂದ್ರ ವಿರುದ್ಧ ಸ್ಪರ್ಧೆ/ ಬಿಜೆಪಿಗೆ ತಿರುಗಿ ಬಿದ್ರಾ ಈಶ್ವರಪ್ಪ?

ಸಮಗ್ರ ನ್ಯೂಸ್; ತಮ್ಮ ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಸಿಗುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಇದೀಗ ತನ್ನ ಪುತ್ರನಿಗೆ ಟಿಕೆಟ್ ನೀಡದ ಕಾರಣಕ್ಕಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ಅವರ ವಿರುದ್ಧವೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡೋದಾಗಿ ಘೋಷಣೆ ಮಾಡಿದ್ದಾರೆ.

Ad Widget . Ad Widget .

ನಾನು ಲೋಕಸಭಾ ಚುನಾವಣೆಗೆ ಹಾವೇರಿಯಿಂದ ನನ್ನ ಮಗ ಕೆ.ಇ ಕಾಂತೇಶ್ ಗೆ ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡ್ ಕೋರಿದ್ದೆ. ಆದ್ರೆ ಅವನಿಗೂ ಟಿಕೆಟ್ ನೀಡಲಿಲ್ಲ ಎಂಬುದಾಗಿ ಸುದ್ದಿಗಾರರೊಂದಿಗೆ ಕಿಡಿಕಾರಿದ್ದಾರೆ.

Ad Widget . Ad Widget .

ನಾನು ಹಿಂದುತ್ವ ಸಿದ್ಧಾಂತವನ್ನೇ ಪ್ರತಿಪಾದಿಸಿಕೊಂಡು ಬಂದಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಪುತ್ರನಿಗೆ ಟಿಕೆಟ್ ಸಿಗೋ ನಿರೀಕ್ಷೆಯಲ್ಲಿ ಇದ್ದೆ. ಆದ್ರೆ ನನ್ನ ಮಗನಿಗೆ ಟಿಕೆಟ್ ನೀಡಿಲ್ಲ. ಇದು ನನಗೆ ಮಾಡಿದ ಅನ್ಯಾಯ ಎಂಬುದಾಗಿ ಆಕ್ರೋಶವನ್ನು ಹೊರ ಹಾಕಿದ್ದಾರೆ. ಅಲ್ಲದೇ ನನ್ನ ಪುತ್ರನಿಗೆ ಟಿಕೆಟ್ ನೀಡದ ಕಾರಣ ಯಡಿಯೂರಪ್ಪ ಪುತ್ರ ಬಿ ವೈ ರಾಘವೇಂದ್ರ ವಿರುದ್ಧವೇ ಲೋಕಸಭಾ ಚುನಾವಣೆಗೆ ಇಳಿಯುವುದಾಗಿ ಘೋಷಿಸಿದ್ದಾರೆ.

Leave a Comment

Your email address will not be published. Required fields are marked *