Ad Widget .

ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ ಮಾಡಿ/ ಕಾರ್ಯಕರ್ತರಿಗೆ ಪ್ರತಾಪ್ ಸಿಂಹ ಸಂದೇಶ

ಸಮಗ್ರ ನ್ಯೂಸ್: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರಿಗೆ ಈ ಬಾರಿ ಟಿಕೆಟ್ ಕೈತಪ್ಪಿ ಹೋಗಿದ್ದು, ಈ ಬಾರಿ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಇದಾದ ಬಳಿಕ ಪ್ರತಾಪ್ ಸಿಂಹ ಕಾರ್ಯಕರ್ತರಿಗೆ, ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ ಮಾಡಿ ಎಂದು ಸಂದೇಶ ರವಾನಿಸಿದ್ದಾರೆ.

Ad Widget . Ad Widget .

ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನ್ನ ಪ್ರೀತಿಯ ಕಾರ್ಯಕರ್ತರೇ ಮತ್ತು ಕೊಡಗು-ಮೈಸೂರಿನ ಬಂಧುಗಳೇ, ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ ಕರೆ ಮಾಡುವುದು ಎಂದು ಅಂಜಬೇಡಿ, ಈಗಲೂ ಮತ್ತು ಮಾಜಿಯಾದ ಮೇಲೂ ಕೈಲಾದ ಕೆಲಸ ಮಾಡಿಕೊಡುತ್ತೇನೆ. ಸೋಮವಾರದಿಂದ ಪ್ರಚಾರ ಕಾರ್ಯಕ್ಕೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *