Ad Widget .

ಬಿಜೆಪಿ ವಿರುದ್ಧ ಬಂಡಾಯವೆದ್ದು ಥಂಡಾ ಹೊಡೆದ ಪುತ್ತಿಲ ಮರಳಿ ಬಿಜೆಪಿಗೆ ಸೇರ್ಪಡೆ

ಸಮಗ್ರ ನ್ಯೂಸ್: ಬಿಜೆಪಿ ವಿರುದ್ಧ ಬಂಡಾಯ ಸಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಪುತ್ತೂರಿನ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.‌ ಈ ಮೂಲಕ ಮತ್ತೆ ಮರಳಿ ಗೂಡಿಗೆ ವಾಪಾಸ್ಸಾಗಿದ್ದಾರೆ.

Ad Widget . Ad Widget .

ಮಾ.14ರ ರಾತ್ರಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ವೇಳೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಸುನಿಲ್ ಕುಮಾರ್ ಕಾರ್ಕಳ ಅವರು ಉಪಸ್ಥಿತರಿದ್ದರು. ಪಕ್ಷದ ಹಿರಿಯ ನಾಯಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅರುಣ್ ಕುಮಾರ್ ಪುತ್ತಿಲ ಅವರು ಮಾತುಕತೆ ನಡೆಸಿದ್ದಾರೆ. ಗಡುವು ಮೇಲೆ ಗಡುವು, ಷರತ್ತು ವಿಧಿಸಿದ್ದ ಪುತ್ತಿಲ ಇಂದು ಯಾವುದೇ ಷರತ್ತುಗಳಿಲ್ಲದೆ ಬೇಷರತ್ ಆಗಿ ಬಿಜೆಪಿಗೆ ಮರಳಿದ್ದಾರೆ.

Ad Widget . Ad Widget .

ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲ ಸಮಿತಿ ಅಧ್ಯಕ್ಷರು ಉಪಸ್ಥಿತರಿದ್ದರು. ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಈಗಾಗಲೇ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಕಣಕ್ಕಿಳಿಸಿ ಪ್ರಚಾರ ಆರಂಭಿಸಿದ್ದು, ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ಒಂದಾಗಿರುವುದು ಒಂದರ್ಥದಲ್ಲಿ ಪುತ್ತೂರು ಭಾಗದಲ್ಲಿ ಮಾತ್ರವಲ್ಲದೆ ದಕ್ಷಿಣಕನ್ನಡದಲ್ಲಿ ಪಕ್ಷಕ್ಕೆ ಧೈರ್ಯ ಹೆಚ್ಚಿಸಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಬಂಡಾಯವೆದ್ದಿದ್ದ ಪುತ್ತಿಲ ಅವರು ಪಕ್ಷೇತರರಾಗಿ 62,458 ಮತಗಳನ್ನು ಪಡೆದಿದ್ದರು. ಬಿಜೆಪಿ ಮೂರನೇ ಸ್ಥಾನಕ್ಕೆ ಇಳಿದಿತ್ತು. ಹಲವು ಬಾರಿ ಮಾತುಕತೆ ವಿಫಲವಾಗಿತ್ತು. ಆದರೆ ನಳಿನ್ ಕುಮಾರ್ ಕಟೀಲ್ ಅವರ ಜಾಗಕ್ಕೆ ಚೌಟ ಅವರ ಹೆಸರು ಘೋಷಣೆಯಾಗುತ್ತಿದ್ದಂತೆ ಪುತ್ತಿಲ ಅವರು ಬಿಜೆಪಿಗೆ ಮರಳಿದ್ದಾರೆ.

Leave a Comment

Your email address will not be published. Required fields are marked *