ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್ ನಟ ಯಶ್ ಅವರ ಹೊಸ ಸಿನಿಮಾದ ಟೈಟಲ್ ಅನ್ನು ಮೊನ್ನೆಯಷ್ಟೆ ರಿವೀಲ್ ಮಾಡಿದ್ದಾರೆ. ಈ ʻಟಾಕ್ಸಿಕ್ʼ ಸಿನಿಮಾದ ಶೂಟಿಂಗ್ ಗೋವಾದಲ್ಲಿ ನಡೆಯುತ್ತಿದ್ದು, ಕೆಲವು ಫೋಟೊ ಹಾಗೂ ವಿಡಿಯೊಗಳು ಲೀಕ್ ಆಗಿವೆ. ವೈರಲ್ ಆದ ಫೋಟೊದಲ್ಲಿ ಯಶ್ ಕೂಡ ಕಾಣಿಸಿಕೊಂಡಿದ್ದಾರೆ. ಆದ್ರೆ ಇದು ಶೂಟಿಂಗ್ ವಿಡಿಯೊ ಹೌದೋ ಅಲ್ಲವೋ ಎಂಬ ಅನುಮಾನವು ಇದೆ.
ಮಲಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಬರೋಬ್ಬರಿ 170 ಕೋಟಿ ರೂಪಾಯಿ ಬಜೆಟ್‌ನ ಈ ಯಶ್ ಚಿತ್ರ ಡ್ರಗ್ ಮಾಫಿಯಾ ಬಗ್ಗೆ ಬೆಳಕು ಚೆಲ್ಲಲಿದೆ ಎಂದು ಮೂಲಗಳು ತಿಳಿಸಿದ್ದು, ಪ್ರಮುಖ ಪಾತ್ರದಲ್ಲಿ ಯಾರೆಲ್ಲ ನಟಿಸುತ್ತಿದ್ದಾರೆ ಎನ್ನುವ ವಿಚಾರವನ್ನು ಚಿತ್ರತಂಡ ಇದುವರೆಗೆ ಬಹಿರಂಗಪಡಿಸಿಲ್ಲ. 2025ರಲ್ಲಿ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ.