Ad Widget .

ಪುತ್ತೂರು: ಕೆಲಸದ ಆಮಿಷವೊಡ್ಡಿ ಯುವತಿಯ ಮೇಲೆ ಅತ್ಯಚಾರ: ಆರೋಪಿಗಳಿಬ್ಬರ ಬಂಧನ

ಸಮಗ್ರ ನ್ಯೂಸ್ : ಕೆಲಸದ ಆಮಿಷವೊಡ್ಡಿ ವಾಮಂಜೂರು ಮೂಲದ ಯುವತಿಯೊಬ್ಬಳನ್ನು ಪುತ್ತೂರಿಗೆ ಕರೆತಂದ ಇಬ್ಬರು ಯುವಕರು ಕೆಮ್ಮಯಿ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರ ನಡೆಸಿ, ಆರೋಪಿಗಳು ಪರಾರಿಯಾಗಿದ್ದಾರೆ.

Ad Widget . Ad Widget .

ಅತ್ಯಾಚಾರಕ್ಕೊಳಗಾದ ಯುವತಿ ಅಸ್ವಸ್ತಗೊಂಡು ಕುಸಿದು ಬಿದ್ದಾಗ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿದಾಗ ಯುವಕರ ಈ ಕೃತ್ಯ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿಯ ದೂರಿನ ಆಧಾರದಲ್ಲಿ ಉಪ್ಪಿನಂಗಡಿ ಕರ್ವೇಲು ನಿವಾಸಿ ಮತ್ತು ಬಂಟ್ವಾಳ ತಾಲೂಕು ನಿವಾಸಿ ಇಬ್ಬರನ್ನು ಪುತ್ತೂರು ಮಹಿಳಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಗೆ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.

Ad Widget . Ad Widget .

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳಿಬ್ಬರನ್ನು ಹೆಡೆಮುರಿ ಕಟ್ಟುವಲ್ಲಿ ಪುತ್ತೂರು ಮಹಿಳಾ ಪೊಲೀಸರು ಯಶಸ್ವಿಯಾಗಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Leave a Comment

Your email address will not be published. Required fields are marked *