Ad Widget .

ಉಡುಪಿ: ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯು ಮಾರ್ಚ್ 12 ರಿಂದ ಮಾರ್ಚ್ 19 ರವರೆಗೆ ನಡೆಯಲಿದ್ದು, ಮಾರ್ಚ್ 16ರಂದು ರಥರೋಹಣ, ಅನ್ನಸಂತರ್ಪಣೆ ಮತ್ತು ಸಂಜೆ 6.30 ಕ್ಕೆ ಶ್ರೀ ಮನ್ಮಹಾರಥೋತ್ಸವ ನಡೆಯಲಿದ್ದು ಈ ಸಮಯ ಕೆಲವರು ಮದ್ಯಪಾನ ಸೇವಿಸಿ ಬಂದು ಕಾನೂನು ಸುವ್ಯಸ್ಥೆಗೆ ಧಕ್ಕೆವುಂಟಾಗುವ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಿರಿಯಡಕ ಪೊಲೀಸ್ ಠಾಣಾ ಸರಹದ್ದಿನ ಪೆರ್ಡೂರು ಗ್ರಾಮದಲ್ಲಿ ಮಾ.16 ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಕರ್ನಾಟಕ ಅಬಕಾರಿ ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹಿರಿಯಡಕ ಪೊಲೀಸ್ ಠಾಣಾ ಸರಹದ್ದಿನ ಪೆರ್ಡೂರು ಗ್ರಾಮದ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ಮತ್ತು ರೆಸ್ಟೋರೆಂಟ್ ಮತ್ತು ಪೈನ್ ಶಾಪ್‌ಗಳ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶವನ್ನು ಹೊರಡಿಸಿದ್ದಾರೆ.

Ad Widget . Ad Widget .

ರಸ್ತೆ ಮಾರ್ಗ ಬದಲಿ: ಪೆರ್ಡೂರು ಶ್ರೀಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಹಿನ್ನೆಲೆಯಲ್ಲಿ ಸದರಿ ರಾ.ಹೆ.169(ಎ) ರ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಮಾರ್ಚ್ 16 ರಂದು ಸಂಜೆ 4 ಗಂಟೆಯಿAದ ರಾತ್ರಿ 10 ಗಂಟೆಯವರೆಗೆ ವಾಹನಗಳಿಗೆ ಈ ಕೆಳಗಿನಂತೆ ಬದಲಿ ಮಾರ್ಗದಲ್ಲಿ ಸಂಚರಿಸಲು ಅಧಿಸೂಚನೆ ಹೊರಡಿಸಲಾಗಿದೆ.

Ad Widget . Ad Widget .

ರಾ.ಹೆ.169(ಎ)ರಲ್ಲಿ ಉಡುಪಿಯಿಂದ ಹೆಬ್ರಿ, ಆಗುಂಬೆ ಕಡೆಗೆ ಹೋಗುವ ವಾಹನಗಳಿಗೆ ಹಿರಿಯಡ್ಕ ಜಂಕ್ಷನ್ ನಲ್ಲಿ ಮಾರ್ಗ ಬದಲಾಯಿಸಿ ಕೋಟ್ನಾಕಟ್ಟೆ-ಹರಿಖಂಡಿಗೆ – ಬೈರಂಪಳ್ಳಿ- ಪೆರ್ಡೂರು- ಪೇಟೆ ಮಾರ್ಗವಾಗಿ ಅಥವಾ ಹಿರಿಯಡ್ಕ ಬಜೆ, ಕುಕ್ಕೆಹಳ್ಳಿ, ಪೇತ್ರಿ ಮಾರ್ಗವಾಗಿ ಹೆಬ್ರಿ ಆಗುಂಬೆಗೆ ಸಂಚರಿಸಬೇಕು. ರಾ.ಹೆ.169(ಎ) ರಲ್ಲಿ ಆಗುಂಬೆ-ಹೆಬ್ರಿಯಿಂದ ಉಡುಪಿ ಕಡೆಗೆ ಬರುವ ವಾಹನಗಳಿಗೆ ಪೆರ್ಡೂರು ಮೇಲ್ನೋಟೆ-ಬೈರಂಪಳ್ಳಿ ಹರಿಖಂಡಿಗೆ-ಕೋಟ್ನಾಕಟ್ಟೆ-ಹಿರಿಯಡ್ಕ ಜಂಕ್ಷನ್ ಮಾರ್ಗವಾಗಿ ಉಡುಪಿಗೆ ಸಂಚರಿಸಬೇಕು.

ರಾ.ಹೆ 169(ಎ) ರಲ್ಲಿ ಹೆಬ್ರಿಯಿಂದ ಪೆರ್ಡೂರು ಮಾರ್ಗವಾಗಿ ಪೇತ್ರಿ-ಬ್ರಹ್ಮಾವರ ಕಡೆಗೆ ಹೋಗುವ ವಾಹನಗಳಿಗೆ ಪೆರ್ಡೂರು ಮೇಲೇಟೆಯ ಆರ್.ಎಸ್.ಎಸ್ ಬ್ಯಾಂಕ್ ಬಳಿ ಇರುವ ಅಲಂಗಾರು ರಸ್ತೆಯ ಮಾರ್ಗವಾಗಿ ಕರ್ಜೆ, ಪೇತ್ರಿ, ಬ್ರಹ್ಮಾವರಕ್ಕೆ ಸಂಚರಿಸಬೇಕು ಎಂದು ಹಾಗೂ ಮಾರ್ಚ್ 16 ರ ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಪೆರ್ಡೂರು ಕೆಳಪೇಟೆಯಿಂದ ಮೇಲ್ಪೇಟೆಯ ಯ ಬಸ್ ನಿಲ್ದಾಣದವರೆಗೆ ವಾಹನ ಸಂಚಾರ ಮುಕ್ತಗೊಳಿಸುವುದು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *