ಶಾಸಕ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಔರಾದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಎದೆ ಬಡಿತದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮುಂಬೈನ ಬಾಂದ್ರಾದ ಹೋಲಿ ಫ್ಯಾಮಿಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget ... ..

ಡಾ.ಎಸ್ ಲೋಖಂಡವಾಲಾ ನೇತೃತ್ವದಲ್ಲಿ ಪ್ರಭು ಚೌಹಾಣ್ ಗೆ ಕಿರು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಸದ್ಯ ಪ್ರಭು ಚೌಹಾಣ್ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Ad Widget

ಇನ್ನೂ ಬೀದರ್‌ ಕ್ಷೇತ್ರದಿಂದ ಭಗವಂತ್ ಖೂಬಾಗೆ ಟಿಕೆಟ್ ನೀಡಬೇಡಿ ಎಂದು ಪ್ರಭು ಚೌಹಾಣ್ ಪಟ್ಟು ಹಿಡಿದಿದ್ದರು. ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಕಾಲಿಗೆ ಬಿದ್ದು ಬೇಡಿಕೊಂಡಿದ್ದರು. ಆದ್ರೆ, ಬಿಜೆಪಿ ಹೈಕಮಾಂಡ್, ಮತ್ತೆ ಬೀದರ್​ ಟಿಕೆಟ್​ ಭಗವಂತ್ ಖೂಬಾಗೆ ನೀಡಿದೆ. ಇದಾದ ಬೆನ್ನಲೇ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರಾಗಿದೆ.

Leave a Comment

Your email address will not be published. Required fields are marked *