ಬೆಳ್ತಂಗಡಿ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ

ಸಮಗ್ರ ನ್ಯೂಸ್ : ಉಜಿರೆ ಎಸ್‌ಡಿಎಂ ಕಾಲೇಜಿನ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿ ಸವಾರರಿಗೆ ಗಾಯವಾಗಿರುವ ಘಟನೆ ನಡೆದಿದೆ. ಉಜಿರೆ ರಾಮಣ್ಣ ನಾಯ್ಕ (57) ಗಾಯಗೊಂಡವರು.

Ad Widget ... ..

ರಾಮಣ್ಣ ನಾಯ್ಕ… ಅವರು ಉಜಿರೆ ಕಡೆಯಿಂದ ಹೋಗುವಾಗ ಧೀರಜ್ ಅವರು ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು ಢಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳ ಸವಾರರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Ad Widget

Leave a Comment

Your email address will not be published. Required fields are marked *