ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಮಾರ್ಚ್ 18 ರಂದು ತಮಿಳುನಾಡಿನ ಕೊಯಂಬತ್ತೂರಿನಲ್ಲಿ ರೋಡ್ ಶೋ ಆಯೋಜಿಸಲು ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕೆ ಪೋಲಿಸ್ ಇಲಾಖೆ ಅನುಮತಿ ನಿರಾಕರಿಸಿತ್ತು. ಆದರೆ ಇದೀಗ ಮೋದಿ ರೋಡ್ ಶೋಗೆ ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದ್ದು, ಈ ಬೆಳವಣಿಗೆ ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ ತಂದಿದೆ.
ಪ್ರಧಾನಿ ನರೇಂದ್ರ ಮೋದಿ. ದಕ್ಷಿಣ ಭಾರತ ಪ್ರವಾಸದಲ್ಲಿದ್ದು, ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ 4 ಕಿಲೋಮೀಟರ್ ರೋಡ್ ಶೋ ನಡೆಸಲು ಬಿಜೆಪಿ ನಿರ್ಧರಿಸಿತ್ತು. ಹೈದರಾಬಾದ್ ಸೇರಿದಂತೆ ಇತರ ದಕ್ಷಿಣ ಭಾರತದ ಪಟ್ಟಣದಲ್ಲೂ ಮೋದಿ ರೋಡ್ ಶೋ ಆಯೋಜಿಸಲಾಗಿದೆ. ಆದರೆ ತಮಿಳುನಾಡು ಪೋಲೀಸರು ಮಾತ್ರ ಅನುಮತಿ ನಿರಾಕರಿಸಿದ್ದರು. ಮಾರ್ಚ್ 18 ರ ಮೋದಿ ರೋಡ್ ಶೋ ಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ತಮಿಳುನಾಡು ಪೋಲೀಸರು ಹೇಳಿದ್ದರು.
ಈ ಕುರಿತು ತಮಿಳುನಾಡು ಬಿಜೆಪಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿಯ ವಿಚಾರಣೆ ನಡೆಸಿದ ಜಸ್ಟೀಸ್ ಎ ಆನಂದ್ ವೆಕಂಟೇಶ್, ಮೋದಿ ರೋಡ್ ಶೋಗೆ ಅನುಮತಿ ನೀಡಿದೆ. ಇದೇ ವೇಳೆ ಪೋಲೀಸರು ಸಮಯ ಹಾಗೂ ಮಾರ್ಗ ಸೂಚಿಸಲು ಪೋಲೀಸರಿಗೆ ಕೋರ್ಟ್ ಸೂಚಿಸಿದೆ. ರೋಡ್ ಶೋ ವೇಳೆ ಬೋರ್ಡ್ ಬ್ಯಾನರ್‍ಗೆ ಅವಕಾಶವಿಲ್ಲ ಎಂದು ಕೋರ್ಟ್ ಸೂಚಿಸಿದೆ. ಸಾರ್ವಜನಿಕರಿಗೆ ಹೆಚ್ಚಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಕೋರ್ಟ್ ಸೂಚನೆ ನೀಡಿದೆ.
ಕೊಯಂಬತ್ತೂರಿನಲ್ಲಿ ಬಿಜೆಪಿ ಆಯೋಜಿಸಿರುವ ಮೋದಿ ರೋಡ್ ಶೋ ಗೆ 1 ಲಕ್ಷಕ್ಕೂ ಅದಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಕೊಯಂಬತ್ತೂರು ಬಿಜೆಪಿ ಜಿಲ್ಲಾಧ್ಯಕ್ಷ ರಮೇಶ್ ಕುಮಾರ್ ಹೇಳಿದ್ದಾರೆ.