Ad Widget .

ಶಿಕ್ಷಕರು ಅರ್ಧಗಂಟೆ ಮೊದಲೇ ಶಾಲೆಗೆ ಬನ್ನಿ| ಇಲಾಖೆ ಆಯುಕ್ತರಿಂದ ಸುತ್ತೋಲೆ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಪಠ್ಯ ಬೋಧನೆ ಮತ್ತು ಮಕ್ಕಳ ಕಲಿಕಾ ಗುಣಮಟ್ಟ ಬಲವರ್ಧನೆಗೊಳಿಸುವ ಸಲುವಾಗಿ ಶಿಕ್ಷಕರು ನಿಗದಿತ ಅವಧಿಗಿಂತ ಅರ್ಧಗಂಟೆ ಮೊದಲೇ ಶಾಲೆಗೆ ಹಾಜರಾಗಿ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಸೂಚಿಸಿದೆ.

Ad Widget . Ad Widget .

ಮಕ್ಕಳ ಶೈಕ್ಷಣಿಕ, ಬೌದ್ಧಿಕ ಹಾಗೂ ಸಾಮಾಜಿಕ ಬೆಳೆವಣಿಗೆ ದೃಷ್ಟಿಯಿಂದ ಶಿಕ್ಷಕರು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಬೇಕು. ಪ್ರತಿ ಶಾಲೆಯಲ್ಲಿ ಮುಖ್ಯ ಶಿಕ್ಷಕರು, ಇತರೆ ಸಹ ಶಿಕ್ಷಕರು ನಿಗದಿತ ಸಮಯಕ್ಕೆ ಅರ್ಧಗಂಟೆ ಮೊದಲೇ ಕರ್ತವ್ಯಕ್ಕೆ ಹಾಜರಾಗಿ ಇಲಾಖಾ ಮಾರ್ಗಸೂಚಿಗಳನ್ನು ಅನುಸರಿಸಬೇಕು.

Ad Widget . Ad Widget .

ರಜೆಯ ಮೇಲೆ ತೆರಳುವಾಗ, ಶಾಲೆಗೆ ಹಾಜರಾಗಿದ್ದ ವೇಳೆ ಅನ್ಯ ಕಾರ್ಯನಿಮಿತ್ತ ಹೊರೆಗೆ ಹೋಗುವುದಾದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪೂರ್ವಾನುಮತಿ ಪಡೆದಿರಬೇಕು. ಶಿಕ್ಷಕರು ಶಾಲಾ ಅವಧಿಯಲ್ಲಿ ಬಿಇಒ, ಡಿಡಿಪಿಐ ಕಚೇರಿಗಳಿಗೆ ತೆರಳುವುದನ್ನು ಕಡ್ಡಾಯವಾಗಿ ನಿಯಂತ್ರಿಸಬೇಕು. ವಿಷಯವಾರು ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ, ಅಗತ್ಯ ಕ್ರಮವಹಿಸಬೇಕು ಎಂದು ಇಲಾಖಾ ಆಯುಕ್ತೆ ಬಿ.ಬಿ.ಕಾವೇರಿ ಸುತ್ತೋಲೆ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *