ಸಮಗ್ರ ನ್ಯೂಸ್ : ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಬದನಾಜೆಯಲ್ಲಿ ನಡೆದಿದೆ.
ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ಎಬ್ಸಿ ಬೈಕ್ ಮತ್ತು ಆಲ್ಟೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಕಾರಿನಲ್ಲಿ ಪ್ರಯಾಣಿಕರಿಗೂ ಗಾಯಗಳಾಗಿದ್ದು, ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತೀ ವೇಗದ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ.