Ad Widget .

ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್ : ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಾರ್ಕಳ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕುಕ್ಕುಂದೂರು ಗ್ರಾಮದ ಸದಾನಂದ ಪೂಜಾರಿ (40) ಎಂದು ಗುರುತಿಸಲಾಗಿದೆ.

Ad Widget . Ad Widget .

ಶುಕ್ರವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಸದಾನಂದ ಅವರ ಮೃತದೇಹ ಶನಿವಾರ ಬೆಳಿಗ್ಗೆ ಮನೆ ಎದುರಿನ ತೆರೆದ ಬಾವಿಯಲ್ಲಿ ಪತ್ತೆಯಾಗಿತ್ತು. ರಾತ್ರಿ ನಿದ್ದೆಯಿಂದ ಎದ್ದು ಮನೆ ಹೊರಗಡೆ ಬಂದ ಸದಾನಂದರು ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬೇಕೆಂದು ಶಂಕಿಸಲಾಗಿದೆ.

Ad Widget . Ad Widget .

ಬೆAಗಳೂರಿನಲ್ಲಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಸಿಬ್ಬಂದಿಯಾಗಿದ್ದ ಸದಾನಂದ ಅವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದುಕೊಂಡು ಹತ್ತಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅವಿವಾಹಿತರಾಗಿದ್ದ ಸದಾನಂದ ಅವರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *