Ad Widget .

ಲೋಕಸಭಾ ಚುನಾವಣೆ/ ಮಾ. 20ಕ್ಕೆ ಕಾಂಗ್ರೆಸ್‍ನ ಎರಡನೇ ಪಟ್ಟಿ ಬಿಡುಗಡೆ ಸಾಧ್ಯತೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಆಗಿದ್ದು, ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಮಾ.20ರಂದು ಅಂತಿಮವಾಗುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Ad Widget . Ad Widget .

ಇಂದು ಮುಂಬೈನಲ್ಲಿ ನಡೆಯಲಿರುವ ಭಾರತ ಜೋಡೋ ನ್ಯಾಯ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ನಾವು ತೆರಳುತ್ತಿದ್ದೇವೆ. ಮಾ. 19ರಂದು ಸಿಇಸಿ ಸಭೆ ನಡೆಯಲಿದ್ದು, ಮಾ. 20ರಂದು ಪಟ್ಟಿ ಅಂತಿಮವಾಗಬಹುದು ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

Ad Widget . Ad Widget .

ರಾಜ್ಯದಲ್ಲಿ ತಾಲೂಕು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳ ಸಭೆಯನ್ನು ಮಾ.21ರಂದು ನಡೆಸಲು ಉದ್ದೇಶಿಸಲಾಗಿದೆ ಎಂದ ಅವರು, ಇವರೆಲ್ಲರಿಗೂ ಲೋಕಸಭೆ ಚುನಾವಣೆಯ ಜವಾಬ್ದಾರಿ ನೀಡಲಾಗುವುದು. ಕಲಬುರ್ಗಿ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *