Ad Widget .

KSRTC ಮಹಿಳಾ ಕಂಡಕ್ಟರ್​ಗಳಿಗೆ ಅಧಿಕಾರಿಗಳಿಂದ ಟಾರ್ಚರ್| ಕಣ್ಣೀರು ಹಾಕಿದ ಸಿಬ್ಬಂದಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದೆ.ಈ ಶಕ್ತಿ‌ ಯೋಜನೆಗಾಗಿ ಕೆಎಸ್​ಆರ್​ಟಿಸಿಯಲ್ಲಿ ಮಹಿಳಾ ಕಂಡಕ್ಟರ್​ಗಳಿಗೆ ಹಗಲು ರಾತ್ರಿ ಶ್ರಮಿಸುವಂತೆ ಅಧಿಕಾರಿಗಳು ಟಾರ್ಚರ್ ನೀಡುತ್ತಿದ್ದಾರೆ ಎಂಬ ಆರೋಪ ಇದೀಗ ಕೇಳಿ ಬಂದಿದೆ. ತಿಂಗಳ ಋತುಚಕ್ರದ ಸಮಸ್ಯೆ ಇದ್ದರೂ ಡ್ಯೂಟಿ ಮಾಡಿ ಅಂತಾರೇ ಎಂದು ದೀಪಾಂಜಲಿ ನಗರದ KSRTC ಡಿಪೋ 5ರ ಕಂಡಕ್ಟರ್ ಮಂಜಮ್ಮ ವಿಡಿಯೋ ಮಾಡಿ ಕಣ್ಣೀರಿಟ್ಟಿದ್ದಾರೆ.

Ad Widget . Ad Widget .

ಅಧಿಕಾರಿಗಳ ಕಿರುಕುಳದ ಬಗ್ಗೆ ಸಿಟಿಎಂ ಅಂತೋಣಿ ಜಾರ್ಜ್ ಅವರ ಗಮನಕ್ಕೆ ತಂದರೆ ಅವರು ದರ್ಪದ ಮಾತುಗಳನ್ನಾಡುತ್ತಾರೆ ಎಂದು ಮಹಿಳಾ ಕಂಡಕ್ಟರ್ ಆರೋಪಿಸಿದ್ದಾರೆ. ಅಲ್ಲದೆ ದರಿದ್ರ ಅಂತ ನಿಂದಿಸಿರುವ ಆಡಿಯೋವೂ ಇದೆ. ಮಂಜಮ್ಮ ಅವರು ಅಧಿಕಾರಿಗಳ ಟಾರ್ಚರ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಪತ್ರ ಬರೆದಿದ್ದಾರೆ. ದೀಪಾಂಜಲಿ ನಗರದ ಡಿಪೋ 5ರ 44 ಜನರ ಸಹಿ ಹಾಕಿ ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದಾರೆ.

Ad Widget . Ad Widget .

ಟಾರ್ಚರ್ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಕ್ಕೆ ಮಹಿಳಾ ಕಂಡಕ್ಟರ್ ಮಂಜಮ್ಮಗೆ ಡ್ಯೂಟಿ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಡಿಪೋ ಮ್ಯಾನೇಜರ್ ಎಂ.ಕೃಷ್ಣಪ್ಪ ಅವರು ಬೇಗ ಬಂದರೂ ಲೇಟ್ ಆಗಿ ಡ್ಯೂಟಿ ನೀಡ್ತಿದ್ದಾರೆ. ಎಷ್ಟೇ ತಡವಾದ್ರೂ ಕೆಲಸ ಮುಗಿಸಿ ಮನೆಗೆ ಹೋಗುವಂತೆ ಟಾರ್ಚರ್ ಮಾಡ್ತಿದ್ದಾರೆ. ಡಿಪೋದ ಇತರ ಅಧಿಕಾರಿಗಳ ಗಮನಕ್ಕೂ ತಂದರೂ ಅವರಿಂದಲೂ ಟಾರ್ಚರ್ ಆಗ್ತಿದೆ. ಅಧಿಕಾರಿಗಳ ಟಾರ್ಚರ್ ಗೆ ರೋಸಿ ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದೇನೆ. ನಾನು ಸೇರಿ 44 ಸಿಬ್ಬಂದಿ ಸಹಿ ಹಾಕಿದ್ದಾರೆ ಎಂದು ಮಂಜಮ್ಮ ತಿಳಿಸಿದ್ದಾರೆ.

Leave a Comment

Your email address will not be published. Required fields are marked *