ಬೆಳ್ತಂಗಡಿ: ರಸ್ತೆಗೆ ಓಡಿಬಂದ ಮಗುವಿಗೆ ರಿಕ್ಷಾ ಢಿಕ್ಕಿಯಾಗಿ ಮೃತ್ಯು

ಸಮಗ್ರ ನ್ಯೂಸ್ : ಆಟೋ ರಿಕ್ಷಾ ಢಿಕ್ಕಿಯಾಗಿ ಮೂರು ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆ ಸೋಣಂದೂರು ಪಣಕಜೆಯಲ್ಲಿ ನಡೆದಿದೆ.

Ad Widget ... ..

ಪಣಕಜೆ ಮುಂಡಾಡಿ ನಿವಾಸಿ ಚಂದ್ರಶೇಖರ್ ಮತ್ತು ಉಷಾ ದಂಪತಿಯ ಪುತ್ರ ಕೌಶಿಕ್ ಮೃತಪಟ್ಟ ಮಗು.

Ad Widget

ಮುಂಡಾಡಿಯಲ್ಲಿ ಚಂದ್ರಶೇಖರ್ ಅವರ ಮನೆ ರಸ್ತೆಯ ಹತ್ತಿರವಿದ್ದು, ಮನೆಯಲ್ಲಿದ್ದ ಮಗು ಓಡಿ ರಸ್ತೆಗೆ ಬಂದಿದೆ. ಈ ವೇಳೆ ಅದೇ ಸಮಯಕ್ಕೆ ಬಂದ ಮಗುವಿಗೆ ರಿಕ್ಷಾ ತಾಗಿ ಗಂಭೀರ ಗಾಯಗೊಂಡಿದ್ದು, ಮಗುವನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ದರೂ, ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ . ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *