Ad Widget .

ದೊಡ್ಮನೆ ರಾಜಕುಮಾರನ 49ನೇ ಹುಟುಹಬ್ಬ| ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಜನಸಾಗರ

ಸಮಗ್ರ ನ್ಯೂಸ್: ಇಂದು ಅಗಲಿದ ತಾರೆ ಪುನೀತ್ ರಾಜ್​ಕುಮಾರ್ ಅವರ 49ನೇ ಹುಟ್ಟುಹಬ್ಬ ಸಂಭ್ರಮ. ಮುಂಜಾನೆಯಿಂದಲೇ ಕಂಠೀರವ ಸ್ಟುಡಿಯೋದ ಅವರ ಸ್ಮಾರಕದ ಬಳಿ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದಾರೆ. ಅಸಲಿಗೆ ಕಳೆದ ಎರಡು ದಿನಗಳಿಂದಲೂ ಸ್ಮಾರಕಕ್ಕೆ ಭೇಟಿ ನೀಡುತ್ತಿರುವ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದೆ. ಇಂದು ಹುಟ್ಟುಹಬ್ಬವಾದ್ದರಿಂದ ಮಧ್ಯರಾತ್ರಿಯಿಂದಲೇ ಹಲವು ರೀತಿಯ ಕಾರ್ಯಕ್ರಮಗಳು ಕಂಠೀರವ ಸ್ಟುಡಿಯೋನಲ್ಲಿನ ಅಪ್ಪು ಸ್ಮಾರಕ ಬಳಿ ಪ್ರಾರಂಭವಾಗಿವೆ. ರಾತ್ರಿಯೇ ಕೇಕ್ ಕತ್ತರಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಅಂದಹಾಗೆ ಅಪ್ಪುವಿನ ಈ ಹುಟ್ಟುಹಬ್ಬವನ್ನು ‘ಸ್ಪೂರ್ತಿಯ ಹಬ್ಬ’ವನ್ನಾಗಿ ಆಚರಿಸುತ್ತಿರುವುದು ವಿಶೇಷವಾಗಿದೆ.

Ad Widget . Ad Widget .

ಲಕ್ಷಕ್ಕೂ ಹೆಚ್ಚು ಮಂದಿ ಅಭಿಮಾನಿಗಳು ಇಂದು ಒಂದೇ ದಿನ ಆಗಮಿಸುವ ನಿರೀಕ್ಷೆ ಇದ್ದು, ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಎಲ್ಲರಿಗೂ ಅನ್ನದಾನ ವ್ಯವಸ್ಥೆಯನ್ನು ದೊಡ್ಮನೆ ಕುಟುಂಬ ಮಾಡಿದೆ. ಬಂದವರಿಗೆಲ್ಲ ಚಿಕನ್ ಬಿರಿಯಾನಿ ನೀಡುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಇದರ ಜವಾಬ್ದಾರಿಯನ್ನು ಯುವ ರಾಜ್​ಕುಮಾರ್ ಹೊತ್ತುಕೊಂಡಿದ್ದಾರೆ. ಇನ್ನೂ ಅಪ್ಪು ಹೆಸರಲ್ಲಿ ರಕ್ತದಾನ, ಅನ್ನದಾನ, ಸಾಮಾಜಮುಖಿ ಕಾರ್ಯಗಳನ್ನು ಇಂದು ಹಮ್ಮಿಕೊಳ್ಳಲಾಗಿದೆ.

Ad Widget . Ad Widget .

ಇಂದು ಅಪ್ಪು ಸಮಾಧಿಗೆ ಕುಟುಂಬಸ್ಥರು ಬಂದು ಪೂಜೆ ಸಲ್ಲಿಸಿದ್ರು, ರಾಘವೇಂದ್ರ ರಾಜ್‍ಕುಮಾರ್, ವಿನಯ್, ಯುವರಾಜ್, ಮಗಳು ವಂದಿತಾ, ಸಮಾಧಿಗೆ ಭೇಟಿ ನೀಡಿದ್ದರು. ಇದೇ ವೇಳೆ ಅಭಿಮಾನಿಗಳು ಅಪ್ಪು ಅಪ್ಪು ಎಂದಿ ಘೋಷಣೆ ಕೂಗಿದ್ರು.

Leave a Comment

Your email address will not be published. Required fields are marked *