Ad Widget .

ಏಳನೇ ವೇತನ ಆಯೋಗದ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ/ ಹೆಚ್ಚಾಗುತ್ತಾ ಸರಕಾರಿ ನೌಕರರ ವೇತನ?

ಸಮಗ್ರ ನ್ಯೂಸ್: ಏಳನೇ ವೇತನ ಆಯೋಗದ ಅಂತಿಮ ವರದಿ ಶನಿವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ರಾಜ್ಯದ ಸರ್ಕಾರಿ ನೌಕರರ ಮೂಲವೇತನದ ಮೇಲೆ ಶೇ.27.5ರಷ್ಟು ಹೆಚ್ಚಿಸಬೇಕು. ಮತ್ತು ಕನಿಷ್ಠ ವೇತನವನ್ನು 17 ಸಾವಿರ ರು.ಗಳಿಂದ 27000 ರು.ಗಳಿಗೆ ಹೆಚ್ಚಿಸಬೇಕು ಎಂಬ ವಿಚಾರಗಳೂ ಸೇರಿದಂತೆ ಹಲವು ಶಿಫಾರಸುಗಳನ್ನು ಮಾಡಲಾಗಿದೆ.

Ad Widget . Ad Widget .

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ನೇತೃತ್ವದ ಆಯೋಗ ವರದಿ ಸಲ್ಲಿಸಿದ್ದು, ಆಯೋಗದ ವರದಿ ಬಗ್ಗೆ ಸಮಗ್ರ ಪರಿಶೀಲನೆ ಮಾಡಿ, ಆರ್ಥಿಕ ಇಲಾಖೆಯ ಅಭಿಪ್ರಾಯ ಪಡೆದು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

Ad Widget . Ad Widget .

ಕೆಲಸದ ಗುಣಮಟ್ಟ ಹೆಚ್ಚಿಸಲು ವಾರದಲ್ಲಿ ಐದು ದಿನ ಮಾತ್ರ ಕೆಲಸದ ಅವಧಿ ಇರಿಸಬೇಕು. ಹಾಗೆಯೇ, ಗರಿಷ್ಠ ವೇತನವನ್ನು 1,04,600 ರು.ಗಳಿಂದ 2,41,200 ರು.ಗೆ ಹೆಚ್ಚಿಸಬೇಕು ಮತ್ತು ಹೊಸ ವೇತನ ಶ್ರೇಣಿಯನ್ನು 2022ರ ಜುಲೈನಿಂದಲೇ ಪೂರ್ವಾನ್ವಯ ಮಾಡಬೇಕು ಎಂದೂ ಕೂಡ ಶಿಫಾರಸು ಮಾಡಲಾಗಿದೆ.

Leave a Comment

Your email address will not be published. Required fields are marked *