ಕಾಸರಗೋಡು: ಖಾಸಗಿ ಬಸ್ ಪಲ್ಟಿ| ಚಾಲಕ ಸಾವು, 20 ಮಂದಿಗೆ ಗಾಯ

ಸಮಗ್ರ ನ್ಯೂಸ್ : ಖಾಸಗಿ ಬಸ್ಸು ಮಗುಚಿ ಬಿದ್ದ ಪರಿಣಾಮ ಚಾಲಕ ಮೃತ ಪಟ್ಟು, ವಿದ್ಯಾರ್ಥಿಗಳು ಸೇರಿದಂತೆ 20 ಮಂದಿ ಗಾಯಗೊಂಡ ಘಟನೆ ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ಚಾಲಿಂಗಾಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ.

Ad Widget ... ..

ಚಾಲಕ ಮಧೂರು ರಾಮನಗರದ ಚೇತನ್ ಕುಮಾರ್ (37) ಮೃತ ದುರ್ದೈವಿ.

Ad Widget

ಮಂಗಳೂರಿನಿಂದ ಕಣ್ಣೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಅಪಘಾತಕ್ಕೀಡಾಗಿದ್ದು, ಚಾಲಿಂಗಾಲ್ ನ ಪೆರಿಯ ಗ್ರಾಮ ಪಂಚಾಯತ್ ಕಚೇರಿ ಸಮೀಪ ಈ ಅವಘಡ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿ ಹಿನ್ನಲೆಯಲ್ಲಿ ಟೋಲ್ ಬೂತ್ ನಿರ್ಮಿಸಲು ಚಾಲಿಂಗಾಲ್ ನಲ್ಲಿ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಿದ್ದು, ಈ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದಿದೆ. ಇನ್ನು ಘಟನೆಯಲ್ಲಿ ಬಸ್ಸಿನಡಿ ಸಿಲುಕಿದ್ದವರನ್ನು ಸ್ಥಳೀಯ ನಿವಾಸಿಗಳು, ಅಗ್ನಿಶಾಮಕ ದಳದ ಸಿಬ್ಬಂದಿಗಳು, ಪೊಲೀಸರು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Comment

Your email address will not be published. Required fields are marked *